ಬೆಂಗಳೂರುಶಾಲಾ ಶಿಕ್ಷಣ ಇಲಾಖೆಯು ಈ ಬಾರಿ 5,8 ಮತ್ತು 9ನೇ ತರಗತಿಗೆ ಮಂಡಳಿಯಿಂದ ಅಥವಾ ಶಾಲೆಯಲ್ಲಿ ಪರೀಕ್ಷೆ ನಡೆಸಲಿದೆಯೇ ಎಂಬ ಗೊಂದಲ ಮುಂದುವರಿದಿದೆ.
ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಗೆ ಸಂಕಲಾತ್ಮಕ (ಎಸ್‌ಎ1 ಮತ್ತು 2) ಮತ್ತು ರೂಪಣಾತ್ಮಕ ಮೌಲ್ಯಾಂಕನಗಳನ್ನು (ಎ್ಎ 1,2,3,4) ಶಾಲಾ ಹಂತದಲ್ಲಿ ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಇತ್ತೀಚೆಗೆ ಸುತ್ತೋಲೆ ಹೊರಡಿಸಿದ್ದಾರೆ.ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಇಲಾಖೆ ವತಿಯಿಂದ ಹೊರಡಿಸುವ ಸುತ್ತೋಲೆ ಮತ್ತು ಜ್ಞಾಪನಗಳನ್ನು ಅನುಸರಿಸುವಂತೆ ನಿರ್ದೇಶನ ನೀಡಿದೆ. ಆದರೆ, ಪ್ರಕರಣವು ಸುಪ್ರೀಂಕೋರ್ಟ್‌ನಲ್ಲಿರುವ ಬಗ್ಗೆ ಎಲ್ಲಿಯೂ ಉಲ್ಲೇಖಿಸಿಲ್ಲ.
5,8 ಮತ್ತಿ 9ನೇ ತರಗತಿ ಮೌಲ್ಯಾಂಕನ ಲಿತಾಂಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದ್ದು, ಅಂತಿಮ ತೀರ್ಪು ಇನ್ನಷ್ಟೇ ಪ್ರಕಟವಾಗಬೇಕಿದೆ. ಈ ಬಗ್ಗೆಯೂ ಸುತ್ತೋಲೆಯಲ್ಲಿ ಉಲ್ಲೇಖಿಸಿಲ್ಲ. ಇದರಿಂದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರಲ್ಲಿ ಗೊಂದಲ ಮುಂದುವರಿದಿದೆ. ಸುಪ್ರೀಂಕೋರ್ಟ್‌ನ ಅಂತಿಮ ತೀರ್ಪು ಪ್ರಕಟವಾದ ಬಳಿಕ ಶಾಲಾ ಹಂತವೋ ಮಂಡಳಿ ಪರೀಕ್ಷೆಗೆಯೋ ಎಂಬ ಗೊಂದಲಕ್ಕೆ ಸ್ಪಷ್ಟತೆ ಸಿಗಲಿದೆ.
ಪ್ರಸ್ತುತ ಶಿಕ್ಷಣ ಹಕ್ಕು ಕಾಯ್ದೆ-2019ರ ತಿದ್ದುಪಡಿಯಲ್ಲಿ ಮಕ್ಕಳ ಕಲಿಕಾ ಮಟ್ಟ ತಿಳಿಯುವ ಉದ್ದೇಶದಿಂದ 5 ಮತ್ತು 8ನೇ ತರಗತಿಗೆ ಮೌಲ್ಯಾಂಕನ ಮಾಡಬಹುದು ಎಂಬ ನಿಯಮವಿದೆ. ಆದರೆ, ಮಂಡಳಿ ಹಂತದಲ್ಲಿ ಎಂಬ ನಿಯಮವಿಲ್ಲ. ಒಂದು ವೇಳೆ ಮಂಡಳಿ ಹಂತದಲ್ಲಿ ಮೌಲ್ಯಾಂಕನ ನಡೆಸಬೇಕಾದರೆ, ರಾಜ್ಯ ಸರ್ಕಾರವು ಆರ್‌ಟಿಇ ನಿಯಮಗಳಿಗೆ ತಿದ್ದುಪಡಿ ತಂದು ಮುಂದಿನ ಹೆಜ್ಜೆ ಇಡಬೇಕಾಗುತ್ತದೆ. ಈ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಿಲ್ಲ. ಈ ಎಲ್ಲ ಕಾರಣಗಳಿಂದ 5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನ ಗೊಂದಲ ಮುಂದುವರಿದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
