ಬೆಂಗಳೂರುಬೆಳಗಾವಿ ವಿಭಾಗದಲ್ಲಿ 2023-24ನೇ ಸಾಲಿನ ಮಕ್ಕಳ ಶೈಕ್ಷಣಿಕ ಪ್ರವಾಸ ಕೈಗೊಲ್ಳುವ ಅವಧಿಯನ್ನು 2024ರ ಜ.15ರ ವರೆಗೆ ಶಾಲಾ ಶಿಕ್ಷಣ ಇಲಾಖೆಯು ವಿಸ್ತರಿಸಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಲು ಡಿಸೆಂಬರ್-2023 ಕೊನೆಯ ದಿನವಾಗಿದೆ. ಆದರೆ, ಈ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಬಸ್ಸುಗಳನ್ನು ಒದಗಿಸಲು ತೊಂದರೆಯಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಬಸ್ಸುಗಳು ಲಭ್ಯವಿಲ್ಲದ ಕಾರಣ ಶಾಲಾ ಮಕ್ಕಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಲು ಅವಧಿಯನ್ನು ವಿಸ್ತರಿಸಬೇಕು ಮತ್ತು ಪ್ರವಾಸ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ಧಾರಾವಾಡ ವಿಭಾಗದ ಅಪರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದರು.
ಈ ಮನವಿಯನ್ನು ಪರಿಗಣಿಸಿರುವ ಆಯುಕ್ತರು, ಬೆಳಗಾವಿ ವಿಭಾಗಕ್ಕೆ ಒಳಪಡುವ ಶಾಲೆಗಳಿಗೆ ಮಾತ್ರ ಪ್ರಸಕ್ತ ಸಾಲಿನ ಮಕ್ಕಳ ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಅವಧಿಯನ್ನು ಜ.15ರ ವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಪ್ರವಾಸ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + eight =
Remember me
