ಬೆಂಗಳೂರು:ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಅವರ ಅಧೀನದಲ್ಲಿ ನರುವ ಎಲ್ಲ ಕಚೇರಿಗಳು ಮತ್ತು ಶಾಲೆಗಳ ನಾಮಲಕವನ್ನು ‘ಶಾಲಾ ಶಿಕ್ಷಣ ಇಲಾಖೆ’ ಎಂದು ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸಚಿವಾಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರುಪದನಾಮೀಕರಣಗೊಳಸಿ ಆದೇಶಿಸಲಾಗಿರುತ್ತದೆ. ಕರ್ನಾಟಕ ಸರ್ಕಾರದ ನಿಯಮಗಳು-1977 ಅನುಸೂಚಿ-5 ರಲ್ಲಿದ್ದ ಶಿಕ್ಷಣ ಇಲಾಖೆ ಶೀರ್ಷಿಕೆಗೆ ಕೂಡ ತಿದ್ದುಪಡಿ ತರಲಾಗಿದೆ. ಅದೇ ರೀತಿ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ‘ಶಾಲಾ ಶಿಕ್ಷಣ ಇಲಾಖೆ’ ಎಂದು ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ:ಹಾವೇರಿ | 40 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್​ಐ ಮತ್ತು ಪೇದೆ
ಶಿಕ್ಷಣ ಇಲಾಖೆ ಆಯುಕ್ತರು, ಕಲಬುರಗಿ ಮತ್ತು ಧಾರವಾಡ ಅಪರ ಆಯುಕ್ತಾಲಯ, ನಿರ್ದೇಶನಾಲಯಗಳು, ಜಿಲ್ಲಾ ಮತ್ತು ತಾಲ್ಲೂಕು/ಬ್ಲಾಕ್ ಕಚೇರಿಗಳು, ವಿಭಾಗ ಹಂತದ ಕಚೇರಿಗಳು, ಜಿಲ್ಲಾ ಹಂತದ ಉಪನಿರ್ದೇಶಕರು, ಡಯಟ್ ಪ್ರಾಂಶುಪಾಲರ ಕಚೇರಿ, ಬ್ಲಾಕ್ ಹಂತದ ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳು ಹಾಗೂ ಕ್ಲಸ್ಟರ್ ಕಚೇರಿಗಳು ‘ಶಾಲಾ ಶಿಕ್ಷಣ’ವೆಂದು ಬದಲಾವಣೆ ಮಾಡಲಾಗಿದೆ.
ಸಮಗ್ರ ಶಿಕ್ಷಣ ಕರ್ನಾಟಕ (ಎಸ್‌ಎಸ್‌ಕೆ)ವನ್ನು ಕೂಡ ಶಾಲಾ ಶಿಕ್ಷಣ ಇಲಾಖೆ ಎಂದು ಬದಲಾವಣೆ ಮಾಡಲಾಗಿದೆ. ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ‘ಶಾಲಾ ಶಿಕ್ಷಣ’ವೆಂದು ಬದಲಾವಣೆ ಮಾಡಬೇಕು. ಎಲ್ಲ ಕಚೇರಿ ಹಾಗೂ ಶಾಲೆಗಳ ನಾಮಲಕದಲ್ಲಿ ‘ಶಾಲಾ ಶಿಕ್ಷಣ ಇಲಾಖೆ’ ಎಂದು ಬರೆಯಲು ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ:ಈ ದೇಶದಲ್ಲಿ ಇನ್ಮುಂದೆ ಮಕ್ಕಳ ಫೋಟೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಬಾರದಂತೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + four =
Remember me
