ಬೆಂಗಳೂರುಶಾಲೆ ಮತ್ತು ಕಾಲೇಜು ಆವರಣ ಹಾಗೂ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವುದು, ಶಾಲೆಗಳಲ್ಲಿನ ನೀರಿನ ತೊಟ್ಟಿ, ಬ್ಯಾರೆಲ್‌ಗಳನ್ನು ವಾರಕ್ಕೊಮ್ಮೆ ತೊಳೆಯುವುದು ಸೇರಿ ಡೆಂಘೆ ಹರಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲ ಶಾಲೆಗಳಿಗೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಪ್ರಸ್ತುತ ಡೆಂಘೆ, ಚಿಕೂನ್‌ಗುನ್ಯಾ ಹಾಗೂ ಜಿಕಾ ಸೇರಿ ಹಲವು ರೋಗಗಳು ವ್ಯಾಪಕವಾಗಿ ಹರಡುತ್ತಿವೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ರೋಗಗಳು ಹರಡದಂತೆ ನಿಯಂತ್ರಿಸಲು ಸಂಬಂಧಿಸಿದಂತೆ ಇಲಾಖೆಗಳು ಮತ್ತು ಶಾಲೆಗಳು ಸಮುದಾಯದ ಸಹಭಾಗಿತ್ವದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ರೋಗಗಳ ಲಕ್ಷಣಗಳು ಕಂಡುಬಂದಲ್ಲಿ ವಹಿಸಬೇಕಾದ ಎಚ್ಚರಿಕೆಯ ಮಾರ್ಗಸೂಚಿಯನ್ನು ಪಾಲನೆ ಮಾಡುವಂತೆ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಶಾಲಾ ವಿದ್ಯಾರ್ಥಿಗಳ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಸಕಾಲದಲ್ಲಿ ತೆಗೆದುಕೊಳ್ಳಲು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ಮತ್ತು ಸಿಬ್ಬಂದಿ ಕೈಜೋಡಿಸುವಂತೆ ತಿಳಿಸಿದ್ದಾರೆ.
– ಶಾಲಾ ಆವರಣದಲ್ಲಿ ಹಾಗೂ ಸುತ್ತಲಿನ ಜಾಗಗಳಲ್ಲಿ ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ನೀರು ಶೇಖರಣೆಯಾಗಿದ್ದಲ್ಲಿ ತೆರವುಗೊಳಿಸಲು ಹಾಗೂ ವಿಲೇವಾರು ಮಾಡಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಬೇಕು
– ಸ್ಥಳೀಯ ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳ ಹಾಗೂ ಸ್ಥಳೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ಶಾಲಾ ಕಟ್ಟಡದಲ್ಲಿ ಅಥವಾ ಆವರಣದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸಿ ಮತ್ತು ಶಾಲಾ ಪರಿಸರಕ್ಕೆ ಸಾಂಕ್ರಾಮಿಕ ರೋಗ ನಿರೋಧಕ ದ್ರಾವಣಗಳನ್ನು ಕಾಲಕಾಲಕ್ಕೆ ಸಿಂಪಡಿಸಲು ಕ್ರಮ ವಹಿಸಬೇಕು
– ಶಾಲೆಗಳಲ್ಲಿನ ನೀರಿನ ತೊಟ್ಟಿ, ಬ್ಯಾರೆಲ್‌ಗಳನ್ನು ವಾರಕ್ಕೊಮ್ಮೆ ನೀರನ್ನು ಖಾಲಿ ಮಾಡಿ ತೊಳೆದು ಒಣಗಿಸಿ ಭರ್ತಿ ಮಾಡಿದ ನಂತರ ಮುಚ್ಚಳ ಮುಚ್ಚಬೇಕು
– ಪ್ರಾರ್ಥನೆ ಸಮಯದಲ್ಲಿ ಡೆಂಘೆ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ಕುರಿತು ಮುನ್ನೆಚ್ಚರಿಕಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಕೊಡಿಸುವುದು
– ರೋಗಗಳ ಹರಡುವಿಕೆಯನ್ನು ತಡೆಗಟ್ಟುವುದಕ್ಕಾಗಿ ಶಾಲೆಗಳಲ್ಲಿ ಭಾಷಣ ಸ್ಪರ್ಧೆ, ರಸಪ್ರಶ್ನೆ ಹಾಗೂ ಕಿರುನಾಟಕಗಳು ಸೇರಿ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು. ಶಾಲೆಗಳಲ್ಲಿನ ಸೈನ್ಸ್ ಕ್ಲಬ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು
– ಒಂದು ವೇಳೆ ಶಾಲಾ ವಿದ್ಯಾರ್ಥಿಗಳಲ್ಲಿ ಇಂತಹ ಜ್ವರ ಪ್ರಕರಣಗಳು ವರದಿಯಾದಲ್ಲಿ ತಕ್ಷಣ ಅಂತಹ ವಿದ್ಯಾರ್ಥಿಗಳನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸುವುದು ಮತ್ತು ಶುಶ್ರೂಷೆ ಮಾಡಿಸುವುದು. ಒಂದು ವೇಳೆ ಶಾಲೆಗಳಲ್ಲಿ ಗುಂಪು ಜ್ವರ ಪ್ರಕರಣಗಳು ವರದಿಯಾದಲ್ಲಿ ತ್ವರಿತವಾಗಿ ಸ್ಥಳೀಯ, ತಾಲ್ಲೂಕು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡುವುದು. ಬಳಿಕ ಮಕ್ಕಳನ್ನು ದಾಖಲಿಸಿ ಚಿಕಿತ್ಸೆ ಕೊಡಿಸಬೇಕು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fourteen =
Remember me
