ಬೆಂಗಳೂರುರಾಜ್ಯದ ಉರ್ದು ಶಾಲೆಗಳಲ್ಲಿಯೂ ಶುಕ್ರವಾರ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.
ಶಾಲಾ ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರ ಮಕ್ಕಳ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸುವಂತೆ ಸೂಚನೆ ನೀಡಲಾಗಿದೆ. ಅದರಂತೆ ಅಚರಣೆ ನಡೆಸಲಾಗುತ್ತಿದೆ.
ರಾಜ್ಯದ ಉರ್ದು ಶಾಲೆಗಳು ಶುಕ್ರವಾರ ಅರ್ಧ ದಿನ ಮತ್ತು ಶನಿವಾರ ಪೂರ್ಣ ದಿನ ಶಾಲೆ ನಡೆಯುತ್ತಿರುವ ಕಾರಣ ಉರ್ದು ಶಾಲೆಗಳಲ್ಲಿ ‘ಸಂಭ್ರಮ ಶನಿವಾರ’ ಆಚರಣೆಯನ್ನು ಶುಕ್ರವಾರೆ ಅಥವಾ ಶನಿವಾರ ಆಚರಿಸುವ ಕುರಿತು ಹಲವು ಶಾಲೆಗಳು ಮಾರ್ಗದರ್ಶನ ನೀಡುವಂತೆ ಕೋರಿದ್ದವು.
ಈ ಹಿನ್ನೆಲೆಯಲ್ಲಿ ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನವಾಗಿದ್ದು, ಶುಕ್ರವಾರ ಅರ್ಧ ದಿನ ಶಾಲೆ ನಡೆಯುವುದರಿಂದ ‘ಶುಕ್ರವಾರ ಬ್ಯಾಗ್ ರಹಿತ ದಿನ’ವನ್ನಾಗಿ ಆಚರಿಸಲು ಕ್ರಮ ವಹಿಸುವಂತೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ. ಸುಮಂಗಲಾ ನಿರ್ದೇಶನ ನೀಡಿದ್ದಾರೆ.
ಚಟುವಟಿಕೆ ದಿನ:
ಬ್ಯಾಗ್ ರಹಿತ ದಿನದಂದು ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ವಿವಿಧ 10 ವಿಷಯಗಳಲ್ಲಿ ಸ್ವಯಂ ವಿವರಣಾತ್ಮಕ ಚಿತ್ರ ಸಹಿತ ಚಟುವಟಿಕೆ ಪುಸ್ತಕಗಳನ್ನು ಹಾಗೂ ಅವುಗಳನ್ನು ತರಗತಿಗಳಲ್ಲಿ ನಿರ್ವಹಿಸಲು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಅನ್ವಯಿಕ ಕಲಿಕಾ ಮನೋಭಾವವನ್ನು ಪ್ರೋತ್ಸಾಹಿಸುವಂತೆ ಕಲಿಕಾ ಹಾಳೆಗಳಲ್ಲಿ ಚಟುವಟಿಕೆಗಳನ್ನು ನೀಡಲಾಗಿದೆ. ಈ ಕಲಿಕಾ ಹಾಳೆಗಳಲ್ಲಿನ ಚಿಟುವಟಿಕೆಗಳಿಗೆ ಪೂರಕವಾಗಿ ಬ್ಯಾಗ್ ರಹಿತ ದಿನ ಆಚರಿಸಲಾಗುತ್ತದೆ.
2019ರ ಆದೇಶ, ಈಗ ಅನುಷ್ಠಾನ:
ಡಿಎಸ್‌ಇಆರ್‌ಟಿ 2017ರಲ್ಲಿ ಬ್ಯಾಗ್ ರಹಿತ ದಿನ ಆಚರಿಸುವ ಸಂಬಂಧ ಕಾರ್ಯಕ್ರಮ ರೂಪಿಸಿತ್ತು. ಇದನ್ನು 2019ರಲ್ಲಿ ಯೋಜನೆ ಅನುಷ್ಠಾನಕ್ಕೆ ಆದೇಶ ಹೊರಡಿಸಿತ್ತು. ಕರೊನಾ ಸೇರಿ ಇನ್ನಿತರ ಕಾರಣಗಳಿಗೆ ಯೋಜನೆ ಅನುಷ್ಠಾನ ಆಗಿರಲಿಲ್ಲ. 2013-24ನೇ ಸಾಲಿನಿಂದ ಅಧಿಕೃತವಾಗಿ ಯೋಜನೆಯನ್ನು ಜಾರಿಗೊಳಿಸಿತ್ತು. ಅದನ್ನು ಈಗ ಉರ್ದು ಶಾಲೆಗಳಿಗೂ ವಿಸ್ತರಿಸಿದೆ.
ಏನೆಲ್ಲ ಚಟುವಟಿಕೆಗಳು:
ಘನತ್ಯಾಜ್ಯ ನಿರ್ವಹಣೆ, ಸುರಕ್ಷಿತ ತಂತ್ರಜ್ಞಾನ ಬಳಕೆ, ಸುರಕ್ಷತೆ ಮತ್ತು ಭದ್ರತೆ, ಸಾರ್ವಜನಿಕ ಸೌಕರ್ಯ, ರಸ್ತೆ ಸುರಕ್ಷತೆ, ಸ್ವಾಸ್ಥ್ಯ ಮತ್ತು ಶುಚಿತ್ವ, ಮಾದಕವಸ್ತು, ಲಿಂಗ ಸಮಾನತೆ, ಆರೋಗ್ಯಕರ ಜೀವನಶೈಲಿ ಸೇರಿ ಇನ್ನಿತರ ವಿಷಯಗಳ ಕುರಿತು ಮಕ್ಕಳಿಗೆ ತಿಳಿಸಿಕೊಡಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 14 =
Remember me
