ಬೆಂಗಳೂರು:ಶಾಲೆಗಳಿಗೆ ಮಾನ್ಯತೆ ನೀಡುವ ವಿಚಾರವಾಗಿ 9 ಮತ್ತು 10ನೇ ತರಗತಿಯನ್ನು ಪ್ರಾಥಮಿಕ ಶಿಕ್ಷಣದ ಮುಂದುವರೆದ ಶಿಕ್ಷಣ ಎಂದು ಪರಿಗಣಿಸಬೇಕು ಮತ್ತು ಹೊಸ ಶಾಲೆ ಎಂದು ಪರಿಗಣಿಸಬಾರದು ಎಂದು ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲ ಉಪ ನಿರ್ದೇಶಕರಿಗೆ ಸೂಚನೆ ನೀಡಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯು ಜ್ಞಾಪನಾ ಪತ್ರ ಹೊರಡಿಸಿದೆ. ಇದಕ್ಕೆ ಅವಶ್ಯ ತಿದ್ದುಪಡಿ ತಂದಿದ್ದು, ಇನ್ನು ಮುಂದೆ 1ರಿಂದ 8 ಅಥವಾ 6ರಿಂದ 8ನೇ ತರಗತಿ ನಡೆಯುತ್ತಿರುವ ಶಾಲಾ ಆವರಣದಲ್ಲಿ 9 ಮತ್ತು 10ನೇ ತರಗತಿಯನ್ನು ನೋಂದಾಯಿಸಲು ಅರ್ಜಿ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ಮುಂದುವರೆದ ಶಾಲೆ ಎಂದು ಪರಿಗಣಿಸಬೇಕು. ಅದರ ಅನ್ವಯ ನೋಂದಣಿ ನಿಯಮಗಳ ಅನುಸಾರ ಕ್ರವಹಿಸಬೇಕು.
ಅದೇ ರೀತಿ ಇಂತಹ ಶಾಲೆಗಳು ಮಾನ್ಯತೆ, ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿಯೂ ಮುಂದುವರೆದ ಶಾಲೆ ಎಂದು ಪರಿಗಣಿಸಬೇಕು. ಇಂತಹ ಶಾಲೆಗಳಿಗೆ ಭದ್ರತಾ ಠೇವಣಿಯನ್ನು ನಿರ್ಧರಿಸುವ ಸಂದರ್ಭದಲ್ಲಿ ಮುಂದುವರೆದ ಶಾಲೆಗೆ ನಿಗದಿ ಪಡಿಸಿರುವ ಮೊತ್ತವನ್ನೇ ಮುಂದುವರೆಸಬೇಕು. ಯಾವುದೇ ಕಾರಣಕ್ಕೂ 9 ಮತ್ತು 10ನೇ ತರಗತಿಯನ್ನು ಹೊಸ ಶಾಲೆ ಎಂದು ಪರಿಗಣಿಸುವಂತಿಲ್ಲ ಎಂದು ಸೂಚಿಸಿದೆ.
ನಿಮ್ಮ ಕಥೆ- ಚಿತ್ರಕಥೆ- ಸಂಭಾಷಣೆ ಬೇಡ, ಕೇಳಿದ ಪ್ರಶ್ನೆಗೆ ಮಾತ್ರ ಉತ್ತರಿಸಿ: ಸಂಸದ ಪ್ರಜ್ವಲ್​ ರೇವಣ್ಣಗೆ ಹೈಕೋರ್ಟ್​ ಚಾಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 3 =
Remember me
