ಬೆಂಗಳೂರುರಾಜ್ಯದ 55 ಪ್ರಾಥಮಿಕ ಮತ್ತು 41 ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಲು ಶಾಲಾ ಶಿಕ್ಷಣ ಇಲಾಖೆಯು ಅನುಮೋದನೆ ನೀಡಿದೆ.
2024-25ನೇ ಸಾಲಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ (6 ಮತ್ತು7ನೇ ತರಗತಿ) ಶಾಲೆಗಳನ್ನಾಗಿ ಮತ್ತು 7ನೇ ತರಗತಿವರೆಗಿನ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿಗೆ ಉನ್ನತೀಕರಿಸಿ ಆರಂಭಿಸುವ ಬಗ್ಗೆ ಅನುಮತಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಉನ್ನತೀಕರಿಸುವ ಸಂಬಂಧ 145 ಕಿರಿಯ ಪ್ರಾಥಮಿಕ ಶಾಲೆಗಳಿಂದ ಅರ್ಜಿಗಳು ಬಂದಿದ್ದು, ಇದರಲ್ಲಿ 55ಕ್ಕೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಂದ 68 ಪ್ರಸ್ತಾವನೆಗಳ: ಸಲ್ಲಿಕೆಯಾಗಿದ್ದು, 41ಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ತಾಲ್ಲೂಕು, ಜಿಲ್ಲಾ ಮತ್ತು ವಿಭಾಗ ಹಂತದ ಪರಿಶೀಲನಾ ಸಮಿತಿಗಳು ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದವು. ಮೂಲ ಸೌಕರ್ಯ ಹೊಂದಿರುವ, ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚಿರುವ, ಬೋಧನೆಗೆ ಶಿಕ್ಷಕರ ಲಭ್ಯತೆ ಇರುವ ಹಾಗೂ ಇಲಾಖೆ/ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗದಂತೆ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉನ್ನತೀಕರಿಸಿದ ತರಗತಿಗಳನ್ನು ಅನುಮೋದನೆ ನೀಡಿದೆ.
ಮಕ್ಕಳ ಬೋಧನೆಗೆ ತೊಂದರೆಯಾಗದಂತೆ ಹಾಲಿ ಕಾರ್ಯನಿರ್ವಹಿಸುತತಿರುವ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಅಕ್ಕಪಕ್ಕದ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರನ್ನು ಆಂತರಿಕ ಹೊಂದಾಣಿಕೆ ಮಾಡಿಕೊಳ್ಳಬೇಕು. ಖಾಲಿ ಇರುವ ಹುದ್ದೆಗಳಳಿದ್ದಲ್ಲಿ ಅತಿಥಿ ಶಿಕ್ಷಕರ ನೇಮಿಸಿಕೊಂಡು ಬೋಧನೆಗೆ ಕ್ರಮ ವಹಿಸುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಕಲಿಕಾ ಹಿನ್ನಡೆಯಾಗದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಉಪ ನಿರ್ದೇಶಕರು ಸೂಕ್ತ ಕ್ರಮ ವಹಿಸಬೇಕೆಂಬ ಸೂಚನೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − ten =
Remember me
