ಬೆಂಗಳೂರು: ಕರೊನಾ ಸೋಂಕು ಹಿಮ್ಮೆಟ್ಟಿಸಲು ದೇಶಾದ್ಯಂತ ಲಾಕ್​ಡೌನ್​ ಹಿನ್ನೆಲೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳ ದಾಖಲಾತಿಯನ್ನು ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡುವಂತೆ ಸಾರ್ವಜನಿಕ ಶಿಕ್ಷಣ ಇಲಾಕೆ ಈಗಾಗಲೇ ಸುತ್ತೋಲೆ ಹೊರಡಿಸಿದೆ.
ಆದರೆ, ಕೆಲ ಖಾಸಗಿ ಶಾಲೆಗಳು 2019-20ನೇ ಸಾಲಿನಲ್ಲಿ ತೇರ್ಗಡೆಗೊಂಡು ಅದೇ ಶಾಲೆಯಲ್ಲಿ 2020-21ನೇ ಸಾಲಿನಲ್ಲಿ ಮುಂದಿನ ತರಗತಿಯಲ್ಲಿ ದಾಖಲಾಗುವ ಮಕ್ಕಳ ಪ್ರವೇಶಕ್ಕೆ ಏಪ್ರಿಲ್​ ಮೇ ತಿಂಗಳಲ್ಲಿ ಕೊನೆಯ ದಿನಾಂಕವನ್ನು ನಿಗದಿಪಡಿಸಿ ಶುಲ್ಕವನ್ನು ಪಾವತಿಸುವಂತೆ ಪಾಲಕರಿಗೆ ಮೊಬೈಲ್​ ಸಂದೇಶ, ಇಮೇಲ್ ಹಾಗೂ ಪತ್ರಮುಖೇನ ಸೂಚನೆ ಒತ್ತಡ ಹೇರುತ್ತಿರುವುದು ಕಂಡುಬಂದಿದೆ.
ರಾಜ್ಯದಲ್ಲಿರುವ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ದಾಖಲಾತಿ ಪ್ರಕ್ರಿಯೆಯನ್ನು ಮುಂದೂಡುವಂತೆ ಈಗಾಗಲೇ ಶಾಲಾ ಆಡಳಿತ ಮಂಡಳಿಗಳಿಗೆ ಸೂಚಿಸಲಾಗಿದೆ. ಜತೆಗೆ, ಪ್ರವೇಶ ಶುಲ್ಕವನ್ನು ಪಾವತಿಸಲು ಒತ್ತಾಯಿಸದಂತೆ ಸ್ಪಷ್ಟಪಡಿಸಲಾಗಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ, ಅಂಥ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ಅಧಿನಿಯಮ, ಪ್ರಕೃತಿ ವಿಕೋಪ ಅಧಿ ನಿಯಮ ಹಾಗೂ ಭಾರತೀಯ ದಂಡ ಸಂಹಿತೆ ಅನ್ವಯ ಕ್ರಿಮಿನಲ್​ ಮೊಕದ್ದಮೆ ಹಾಗೂ ಶಿಕ್ಷಣ ಕಾಯ್ದೆಯನ್ವಯ ಶಾಲೆಗಳ ಮಾನ್ಯತೆಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿ ಸುತ್ತೋಲೆ ಹೊರಡಿಸಿದೆ.
ಶಾಲಾ ಶಿಕ್ಷಕರ ರಜೆ ಏಪ್ರಿಲ್​ 11ಕ್ಕೆ ವಿಸ್ತರಿಸಿದ ರಾಜ್ಯ ಸರ್ಕಾರ: ವಿದ್ಯಾರ್ಥಿ ದಾಖಲಾತಿ ಆರಂಭಿಸಿದರೆ ಮಾನ್ಯತೆ ರದ್ದು ಅಥವಾ ಇತರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
