ಬೆಂಗಳೂರು:2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ ಇಂದು ಪ್ರಕಟಿಸಲಾಗಿದೆ.
2024 ಮಾರ್ಚ್​ 02ರಿಂದ ಮಾರ್ಚ್​ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್​ 25 ರಿಂದ ಏಪ್ರಿಲ್​​ 06 ರವರೆಗೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಂಡಲಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ.
ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್‌ 15ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.
ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ:[email protected]ಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಸ್​​ಎಸ್​​ಎಲ್​​​ಸಿ ವೇಳಾಪಟ್ಟಿಗಾಗಿ ಈ ಲಿಂಕ್ ಕ್ಲಿಕ್​​ ಮಾಡಿ
ದ್ವಿತೀಯ ಪಿಯುಸಿ ವೇಳಾಪಟ್ಟಿಗಾಗಿ ಈ ಲಿಂಕ್​​ ಕ್ಲಿಕ್ ಮಾಡಿ
ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ, ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ: ಸಿಎಂ ಸಿದ್ದರಾಮಯ್ಯ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + five =
Remember me
