ಬೆಂಗಳೂರು:ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರಿಗೆ ಇತ್ತೀಚೆಗಷ್ಟೇ ಕರೊನಾ ಸೋಂಕು ದೃಢಪಟ್ಟು, ಇಷ್ಟು ದಿನ ಹೋಂ ಕ್ವಾರಂಟೈನ್‌ನಲ್ಲಿದ್ದರು. ಶನಿವಾರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕರೊನಾದಿಂದ ಶಿಕ್ಷಕರ ಸಾವು ಹೆಚ್ಚಾಗುತ್ತಿದ್ದು, ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಬೇಕೆಂಬ ಒತ್ತಾಯ ಹೆಚ್ಚಾಗಿದ್ದ ಕಾರಣ, ಶನಿವಾರ ಮಧ್ಯಾಹ್ನವಷ್ಟೇ ಸಚಿವರು ಆ ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುತ್ತಿರುವುದಾಗಿ ಘೋಷಿಸಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆಯೇ ವೇದನೆಯೊಂದಿಗೆ ಕುಸಿದ ಚಿರಾಗ್​ ಪಾಸ್ವಾನ್​
ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಆಯುಕ್ತ ಅನ್ಬುಕುಮಾರ್ ಅವರಿಗೆ ಕೂಡ ಶುಕ್ರವಾರ ಕರೊನಾ ದೃಢಪಟ್ಟಿದ್ದು, ಕೆಲ ಲಕ್ಷಣಗಳು ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚಾಮರಾಜನಗರ ಮತ್ತು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಚಾಮರಾಜನಗರ ಪ್ರವಾಸ ಮುಗಿಸಿದ ಬಳಿಕ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಪ್ರವಾಸ ಮೊಟಕುಗೊಳಿಸಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.
ಕರೊನಾ ಎಫೆಕ್ಟ್: ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರೂ ಪಾಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 15 =
Remember me
