ಬೆಂಗಳೂರು:ಲಾಕ್​ಡೌನ್ ವಿಸ್ತರಣೆಯಾಗಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಲಾಗುತ್ತಿವೆ. ಈ ವೇಳೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗ ಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್ ವಿದ್ಯಾರ್ಥಿಗಳಿಗೆ ಕರೆ ಮಾಡಿ ಆತ್ಮವಿಶ್ವಾಸ ತುಂಬಿದ್ದಾರೆ.
ಸೋಮವಾರ ಸಚಿವರು ಕೆಲವು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಮಾತನಾಡಿದರು. ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ. ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಿ ಎಂದು ಕಿವಿಮಾತು ಹೇಳಿದ್ದಾರೆ.
ದೂರದರ್ಶನ, ಆಕಾಶ ವಾಣಿ ಸೇರಿ ಹಲವು ಮಾಧ್ಯಮಗಳ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪೂರ್ವಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಶೀಘ್ರದಲ್ಲೇ ಪ್ರಸಾರ ಮಾಡಲಿದ್ದೇವೆ. ಅದನ್ನು ಅನುಸರಣೆ ಮಾಡಬೇಕೆಂದು ಸೂಚಿಸಿದರು.
ಬಳ್ಳಾರಿ, ಕೊಪ್ಪಳ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರೆ ಮಾಡಿ ಮಾತನಾಡಿದರು. ಓದುತ್ತಿರುವ ವಿಧಾನ, ಕರೊನಾ ವೇಳೆ ಜಾಗೃತರಾಗಿರಬೇಕು. ಮಾಸ್ಕ್ ಹಾಕಿಕೊಳ್ಳಬೇಕು. ಇದೇ ವೇಳೆ ಪರೀಕ್ಷೆಗೂ ಸಜ್ಜುಗೊಳ್ಳಬೇಕು. ಲಾಕ್​ಡೌನ್ ಮುಗಿದ ಬಳಿಕ ಪರೀಕ್ಷೆ ಆಯೋಜಿಸುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಹೇಳಿದರು.
ಇದೇ ವೇಳೆ ಮಕ್ಕಳು ಸಹ ಪರೀಕ್ಷೆ ಯಾವಾಗ ಆಯೋಜಿಸುತ್ತೀರಾ ಎಂದು ಸಚಿವರನ್ನು ಪ್ರಶ್ನಿಸಿ ತಮ್ಮಲ್ಲಿದ್ದ ಸಂದೇಹಗಳನ್ನು ಬಗೆಹರಿಸಿಕೊಂಡರು. ಪರೀಕ್ಷೆ ಬೇಕೋ, ಬೇಡವೋ ಎಂಬುದಕ್ಕೆ ವಿದ್ಯಾರ್ಥಿಗಳು ಬೇಕು ಎಂದು ಉತ್ತರಿಸಿದ್ದು, ಸಚಿವರಲ್ಲೂ ಸಂತಸ ಮೂಡಲು ಕಾರಣವಾಯಿತು.
ಏಕರೂಪ ಟಿಕೆಟ್ ವ್ಯವಸ್ಥೆಗೆ ಭರದ ಸಿದ್ಧತೆ: ಮೆಟ್ರೋ, ಬಸ್ ಪ್ರಯಾಣಕ್ಕೆ ಒಂದೇ ಕಾರ್ಡ್, ವ್ಯವಸ್ಥೆ ನಿರ್ವಹಣೆಗೆ ಟೆಂಡರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + four =
Remember me
