ಬೆಂಗಳೂರು:ಆನ್‌ಲೈನ್ ಶಿಕ್ಷಣದ ಹೆಸರಿನಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಲಕ್ಷಾಂತರ ಶುಲ್ಕ ವಸೂಲಿ ಮಾಡುತ್ತಿವೆ ಎಂದು ಆರೋಪಿಸಿ ಚೇತನ ಖಾಸಗಿ ಶಾಲೆಯ ಪಾಲಕರ ಸಂಘ ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು.
ಬಹುತೇಕ ಖಾಸಗಿ ಶಾಲೆಗಳು ಆನ್‌ಲೈನ್ ಶಿಕ್ಷಣದ ಹೆಸರಿನಲ್ಲಿ ಈಗಾಗಲೇ ವಸೂಲಿಗೆ ಇಳಿದಿವೆ. ಎಲ್ಲ ಪಾಲಕರಿಗೆ ವಾಟ್ಸ್‌ಆ್ಯಪ್, ಇ-ಮೇಲ್ ಮೂಲಕ ಎರಡನೇ ಹಂತದ ಶುಲ್ಕ ಕಟ್ಟಿ ಎಂದು ಒತ್ತಡ ಹಾಕಲಾಗುತ್ತಿದೆ ಎಂದು ಆರೋಪಿಸಿ ನೂರಾರು ಪಾಲಕರು ಖಾಸಗಿ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು.
ಸರ್ಕಾರ ಕೂಡಲೇ ಖಾಸಗಿ ಶಾಲಾ ಶುಲ್ಕ ನಿಗದಿ ಮಾಡಬೇಕು. ರಾಜ್ಯದಲ್ಲಿ ಶಾಲಾ ಶುಲ್ಕದ ಹೆಸರಿನಲ್ಲಿ ನಡೆಯುತ್ತಿರುವ ದಂಧೆ ನಿಲ್ಲಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಖಾಸಗಿ ಶಾಲಾ ಆಡಳಿತ ಮಂಡಳಿಗೆ ಕಡಿವಾಣ ಹಾಕದಿದ್ದರೆ, ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶುಲ್ಕ ಪಾವತಿಸಬೇಕು:ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕವಿಲ್ಲದೇ ಶಾಲೆ ನಡೆಸಲು ಹರಸಾಹಸ ಪಡುತ್ತಿದ್ದಾರೆ. ಇಲ್ಲಿನ ಸಿಬ್ಬಂದಿ ಮತ್ತು ಶಿಕ್ಷಕರಿಗೂ ಸಂಸಾರ ಇದೆ. ಅವರ ಜೀವನ ಸಹ ನಡೆಯಬೇಕು. ಅತಿ ಹೆಚ್ಚಾಗಿ ಶುಲ್ಕ ವಸೂಲಿ ಮಾಡುವ ವಿರುದ್ಧ ಕ್ರಮ ಜರುಗಿಸಲಿ ತಪ್ಪೇನು ಇಲ್ಲ. ಆದರೆ, ಬಜೆಟ್ ಶಾಲೆಗಳ ವಿರುದ್ಧ ಪ್ರತಿಭಟನೆ ನಡೆಸುವುದು ಸೂಕ್ತವಲ್ಲ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗ ಒಕ್ಕೂಟ(ಕ್ಯಾಮ್ಸ್)ದ ಪ್ರಧನಾ ಕಾರ್ಯದರ್ಶಿ ಡಿ.ಶಶಿಕುಮಾರ್ ಹೇಳಿದ್ದಾರೆ.
ಟಿಫನ್ ಬಾಕ್ಸ್​ನಲ್ಲೇನಿರಬಹುದು ಗೆಸ್ ಮಾಡಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − 1 =
Remember me
