ಬೆಂಗಳೂರು:ಸಂಶೋಧನಾಧಾರಿತವಾಗಿರುವ ಎಕಾಗ್ರಿಡ್ ವಿಶ್ವವಿದ್ಯಾಲಯ ಬೆಂಗಳೂರು ಅಥವಾ ಮೈಸೂರಿನಲ್ಲಿ ತನ್ನ ಕ್ಯಾಂಪಸ್ ತೆರೆಯಲು ಆಸಕ್ತಿ ತಾಳಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ 200 ಎಕರೆ ಜಮೀನು ಬೇಕೆಂದು ಕೇಳಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ಈ ಸಂಬಂಧ ವಿಶ್ವವಿದ್ಯಾಲಯದ ಪ್ರತಿನಿಧಿಗಳಾದ ಪ್ರೊ.ಕೃಷ್ಣ ಸಾರಸ್ವತ್ ಮತ್ತು ಸಿಒಒ ಶೈಲೇಂದ್ರ ಕುಮಾರ್ ಅವರೊಂದಿಗೆ ವಿಸ್ತೃತ ವಿಚಾರ ವಿನಿಮಯ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
2018ರಲ್ಲಿ ಭಾರತದಲ್ಲೇ ಕಾರ್ಯಾರಂಭ ಮಾಡಿರುವ ಎಕಾಗ್ರಿಡ್ ವಿಶ್ವವಿದ್ಯಾಲಯವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆಗಳನ್ನು ಕೈಗೊಳ್ಳುವ ಗುರಿ ಹೊಂದಿದೆ. ಮುಂಬರುವ ದಿನಗಳಲ್ಲಿ ವಿ.ವಿ.ಯು ಸ್ನಾತಕೋತ್ತರ ಕೋರ್ಸುಗಳನ್ನು ಆರಂಭಿಸಲು ಉದ್ದೇಶಿಸಿದೆ. ಜತೆಗೆ ದೇಶದಲ್ಲಿ ಅದು ಅಗ್ರಶ್ರೇಣಿಯ ಮೊದಲ 25 ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದೆ. ಕರ್ನಾಟಕದಲ್ಲಿ ಇರುವ ಉನ್ನತ ಶಿಕ್ಷಣ ಕಾರ್ಯ ಪರಿಸರದಲ್ಲಿರುವ ಅತ್ಯುತ್ತಮ ನೀತಿಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಫಿಕ್ಟೀವ್ ಕಂಪನಿ ಜತೆ ಮಾತುಕತೆ:
ಮೆಕ್ಯಾನಿಕಲ್ ಬಿಡಿಭಾಗಗಳ ಉತ್ಪಾದನೆಗೆ ಜಾಗತಿಕ ಮಟ್ಟದಲ್ಲಿ ಹೆಸರಾಗಿರುವ ಫಿಕ್ಟೀವ್ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳೊಂದಿಗೆ ಕೂಡ ಇದೇ ಸಂದರ್ಭದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಗ್ರ ಬೆಳವಣಿಗೆ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಕೇಂದ್ರ ಕಚೇರಿ ಹೊಂದಿರುವ ಈ ಕಂಪನಿಯು ಇತ್ತೀಚೆಗೆ ಬೆಂಗಳೂರಿನಲ್ಲಿ ತನ್ನ ಭಾರತದ ಪ್ರಧಾನ ಕಚೇರಿಯನ್ನು ತೆರೆದಿದೆ. ಕರ್ನಾಟಕದಲ್ಲಿ ಮೆಕ್ಯಾನಿಕಲ್ ಬಿಡಿಭಾಗಗಳ ಉತ್ಪಾದನೆಯನ್ನು ಬೆಂಬಲಿಸುವಂತಹ ಮತ್ತು ಕೃತಕ ಬುದ್ಧಿಮತ್ತೆ ಹಾಗೂ ಮಶೀನ್ ಲರ್ನಿಂಗ್ ಮೂಲಕ ತಂತ್ರಜ್ಞಾನದ ಬಲ ನೀಡುವ ಕುರಿತು ವಿಚಾರ ವಿನಿಮಯ ನಡೆಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.
ಈ ಭೇಟಿಯಲ್ಲಿ ವೈಮಾಂತರಿಕ್ಷ, ಮಶೀನ್ ಟೂಲ್ಸ್, ಆಟೋ/ಇ.ವಿ., ಮತ್ತು ಕೈಗಾರಿಕಾ ಕ್ರಾಂತಿ 4.0 ಕ್ಷೇತ್ರಗಳಲ್ಲಿ ಇಡಬಹುದಾದ ಹೆಜ್ಜೆಗಳನ್ನು ಕುರಿತು ಪರಸ್ಪರ ಆಸಕ್ತಿಗಳನ್ನು ಹಂಚಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕಂಪನಿಯ ಪರವಾಗಿ ಸಿಎ್ಒ ಎಡ್ಡೀ ಚೆನ್, ನಿರ್ದೇಶಕ ಆ್ಯಡಂ ರೋಡ್ಸ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + three =
Remember me
