ಬೆಂಗಳೂರು:ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಸಮಾರಂಭ ಆಯೋಜನೆಗೆ ಅನುಮತಿ ನೀಡಲು ಬಿಬಿಎಂಪಿಯ 63 ಉಪವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಕೇಂದ್ರ ತೆರೆಯಲಾಗುತ್ತಿದೆ ಎಂದು ಬಿಬಿಎಂಪಿ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಇದನ್ನೂ ಓದಿ:ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಗೆ ಮಾರ್ಷಲ್ ಆರ್ಟ್ಸ್ ತರಬೇತಿ!
ಗಣೇಶ ಚತುರ್ಥಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ಬುಧವಾರ ಆಯೋಜಿಸಿದ್ದ “ಶಾಂತಿ ಸೌಹಾರ್ದ ಸಭೆಯಲ್ಲಿ ಅವರು ಮಾತನಾಡಿದರು.
ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು. ಇಲಾಖೆಗಳ ನೋಡಲ್ ಅಧಿಕಾರಿಗಳ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ. ಅದರಂತೆ ಗಣೇಶ ಮೂರ್ತಿಗಳನ್ನು ಕೂರಿಸುವವರು ಏಕಗವಾಕ್ಷಿ ಕೇಂದ್ರಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪತ್ರ ಪಡೆಯಬಹುದು. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದ್ದು, ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ಪೂಜಿಸಬೇಕು ಎಂದು ಸೂಚಿಸಿದರು.
‘ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಪೊಲೀಸ್​ ವ್ಯವಸ್ಥೆಯ ಜೊತೆಗೆ ಬ್ಯಾರಿಕೇಡಿಂಗ್, ಸಿಸಿಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ಹಲಸೂರು ಕೆರೆ ಸೇರಿದಂತೆ ಇನ್ನಿತರೆ ಪ್ರಮುಖ ಕೆರೆಗಳ ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಂಡು ಸರಿಯಾಗಿ ವಿಸರ್ಜನೆ ಮಾಡಲು ಅವಕಾಶ ಮಾಡಿಕೊಡಲಾಗುವುದು. ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಮಾತನಾಡಿ, ಪ್ರತಿ ವರ್ಷದಂತೆ ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು. ಈಗಾಗಲೇ ಎಲ್ಲಾ ಕಡೆ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಈ ಬಾರಿ ಯಾವುದೇ ರೀತಿಯ ಅನಾನುಕೂಲವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಾಲಿಕೆ, ಪೊಲೀಸ್ ಇಲಾಖೆಯಿಂದ ಬರುವ ಸಲಹೆ, ಸೂಚನೆಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ಮೆರವಣಿಗೆ, ಮೆರವಣಿಗೆಯ ಮಾರ್ಗಕ್ಕೆ ಎಲ್ಲರೂ ಸಹಕಾರ ನೀಡಬೇಕು. ಹಬ್ಬದ ವೇಳೆ ಅನಾನುಕೂಲ, ಅಚಾತುರ್ಯ ನಡೆಯದಂತೆ ನೋಡಿಕೋಳ್ಳಲಾಗುವುದು. ಎಲ್ಲಿಯೂ ಸಂಚಾರ ದಟ್ಟಣೆಯಾಗದಂತೆ ಪೊಲೀಸ್ ಅಧಿಕರಿಗಳು ಸೂಕ್ರ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರಸ್ತೆಗಳ ನಡುವೆ ಗಣೇಶ ಮೂರ್ತಿಗಳನ್ನಿಡುವುದನ್ನು ನಿಯಂತ್ರಿಸಿ ಸೂಕ್ತವಾದ ಜಾಗವನ್ನು ಗುರುತಿಸಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ, ಇದರಿಂದ ನಾಗರೀಕರಿಗೆ ಅನುಕೂಲವಾಗಲಿದೆ. ಕಾನೂನು ವ್ಯವಸ್ಥೆಯಲ್ಲಿ ಯಾವುದೇ ರೀತಿಯ ದಕ್ಕೆಯಾಗದಂತೆ ಸಂಭ್ರಮದಿಂದ, ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸೋಣ ಎಂದು‌ ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮಣ ಗುಪ್ತಾ, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್, ಬೆಸ್ಕಾಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಗಣೇಶ ಪ್ರತಿಷ್ಠಾನದ ಆಯೋಜಕರು, ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
60 ವರ್ಷದ ಅರ್ಚಕನ ಜೊತೆ 20 ವರ್ಷದ ಯುವತಿ ಚಾಟಿಂಗ್: ಆನ್​ಲೈನ್​ನಲ್ಲೇ ಪೂಜಾರಿಗೆ ಲಕ್ಷ, ಲಕ್ಷ ಪಂಗನಾಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
