ಬೆಂಗಳೂರು:ಬಡವರು, ಮಧ್ಯಮ ವರ್ಗದವರು, ಕಾರ್ಮಿಕರು ಸೇರಿ ಪ್ರತಿಯೊಬ್ಬರಿಗೂ ಸ್ಪಂದಿಸುವ ಗಾಂಧಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮಹಾರಾಷ್ಟ್ರದ ತಿ ಮುಖ್ಯಮಂತ್ರಿ ಏಕನಾಥ ಶಿಂಧೆ ಮನವಿ ಮಾಡಿದ್ದಾರೆ.
ಭಾನುವಾರ ಗಾಂಧಿನಗರದಲ್ಲಿ ವಿವಿಧ ಸಮುದಾಯದ ಮುಖಂಡರನ್ನು ಸಪ್ತಗಿರಿಗೌಡ ಪರವಾಗಿ ಭೇಟಿಯಾದ ಶಿಂಧೆ ಹಾಗೂ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್, ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಕೋರಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದರೆ ಇಲ್ಲಿನ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಪ್ತಗಿರಿಗೌಡ ಬದ್ಧರಾಗಿರುತ್ತಾರೆ. ನಿಮ್ಮ ಮನೆಮಗನಂತೆ ಇರುವ ಬಿಜೆಪಿ ಅಭ್ಯರ್ಥಿ ಗೆದ್ದರೆ ಕ್ಷೇತ್ರದ ಚಿತ್ರಣವೇ ಬದಲಾಗಲಿದೆ ಎಂದರು.
ಕ್ಷೇತ್ರದ ಮತದಾರರು ಪ್ರಬುದ್ಧರಾಗಿದ್ದು, ಆಸೆ, ಆಮಿಷಕ್ಕೆ ಬಲಿಯಾಗಲಾರರು. ಸದಾ ಅಭಿವೃದ್ಧಿಗೆ ಬದ್ಧವಾಗಿರುವ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲಿದ್ದಾರೆ. ಮೇ 10ರಂದು ನಡೆಯುವ ಮತದಾನದ ವೇಳೆ ನೀವು ಹಾಕುವ ಒಂದೊಂದು ಮತವು ಕ್ಷೇತ್ರದ ಭವಿಷ್ಯವನ್ನು ತೀರ್ಮಾನಿಸಲಿದೆ ಎಂದರು.
ದತ್ತಾತ್ರೇಯ ವಾರ್ಡ್, ಮುನೇಶ್ವರ ಬ್ಲಾಕ್, ಕಸ್ತೂರಬಾನಗರ, ರಾಜಬೀದಿ, ಬಂಡೆಕಲ್ ರಸ್ತೆ, ಶೋಭಾ ಅಪಾರ್ಟ್‌ಮೆಂಟ್ ಮುಂತಾದೆಡೆ ಸಪ್ತಗಿರಿಗೌಡ ಬಿರುಸಿನ ಮತಯಾಚನೆ ಮಾಡಿದರು. ನಂತರ ಮಾತನಾಡಿ, ಕ್ಷೇತ್ರದ ಹೋದಕಡೆಯಲ್ಲೆಲ್ಲ ಜಾತಿ, ಮತ, ಧರ್ಮ ಎಲ್ಲವನ್ನೂ ಮೀರಿ ನನ್ನನ್ನು ಮನೆ ಮಗನಂತೆ ಕಂಡಿದ್ದಾರೆ. ಈ ಬಾರಿ ಮತ ನೀಡಿ ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಅಪಾರ್ಟ್‌ಮೆಂಟ್ ನಿವಾಸಿಗಳು ಕೆಲ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಪ್ತಗಿರಿ ಗೌಡ, ಈ ಬಾರಿ ಚುನಾವಣೆಯಲ್ಲಿ ತಮಗೆ ಹಾಕಿ ಗೆಲ್ಲಿಸಿದರೆ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seven =
Remember me
