| ಬೇಲೂರು ಹರೀಶ ಬೆಂಗಳೂರು
ಪಡಿತರ ಸೋರಿಕೆ ತಡೆಗಟ್ಟಲು ಆಹಾರ ಇಲಾಖೆ ಜಾರಿಗೆ ತಂದಿರುವ ರೇಷನ್ ಕಾರ್ಡ್​ಗೆ ಆಧಾರ್ ಜೋಡಣೆ (ಇಕೆವೈಸಿ) ಪ್ರಕ್ರಿಯೆಗೆ ಗ್ರಹಣ ಬಡಿದಿದೆ. ಒಂದೂವರೆ ವರ್ಷ ಕಳೆದರೂ ಈವರೆಗೆ ಶೇ.39 ಇಕೆವೈಸಿ ಮುಗಿದಿದ್ದು, ಈಗ ಕರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ.
ಬೋಗಸ್ ಕಾರ್ಡ್​ಗಳನ್ನು ತಡೆಯುವ ಸಲುವಾಗಿ 4 ವರ್ಷಗಳ ಹಿಂದೆ ರಾಜ್ಯಾದ್ಯಂತ ರೇಷನ್ ಕಾರ್ಡ್​ಗಳ ಪರಿಶೀಲನೆ ಕಾರ್ಯ ನಡೆದಿತ್ತು. ನಂತರ, ರೇಷನ್ ಕಾರ್ಡ್​ಗೆ ಆಧಾರ್ ಜೋಡಣೆ ಮಾಡಬೇಕೆಂಬ ನಿಯಮ ತರಲಾಗಿತ್ತು. ಅದರಂತೆ, ಶೇ.100 ಆಧಾರ್ ಜೋಡಣೆಯಾಗಿತ್ತು. ಈ ವೇಳೆ ಲಕ್ಷಾಂತರ ಬೋಗಸ್ ಕಾರ್ಡ್ ಪತ್ತೆಯಾಗಿತ್ತು. ಆ ಬಳಿಕ ಕಾರ್ಡ್​ಗಳ ಪರಿಶೀಲನೆ ಕಾರ್ಯವಾಗಿರಲಿಲ್ಲ. ಪ್ರಸ್ತುತ ರಾಜ್ಯದಲ್ಲಿ 7,69,585 ಅಂತ್ಯೋದಯ, 1,16,84,911 ಬಿಪಿಎಲ್ ಮತ್ತು 19,41,692 ಎಪಿಎಲ್ ಸೇರಿ ಒಟ್ಟು 1,43,96,188 ಕಾರ್ಡ್​ಗಳಿದ್ದು, 4,87,33,221 ಸದಸ್ಯರಿದ್ದಾರೆ. ಕಳೆದ 4 ವರ್ಷಗಳಲ್ಲಿ ಅಂದಾಜು 10 ಲಕ್ಷ ಫಲಾನುಭವಿಗಳು ಮೃತಪಟ್ಟಿರುತ್ತಾರೆ. ಅವರ ಕುಟುಂಬದವರು ಸತ್ತಿರುವ ಫಲಾನುಭವಿಗಳ ಹೆಸರಿನಲ್ಲಿ ರೇಷನ್ ಪಡೆಯುತ್ತಿದ್ದಾರೆ. ಹೀಗಾಗಿ, ರಾಷ್ಟ್ರೀಯ ಆಹಾರ ಸುರಕ್ಷತೆ ಕಾಯ್ದೆ-2013 (ಎನ್​ಎಫ್​ಎಸ್​ಎ) ಪ್ರಕಾರ ಹಾಗೂ ಸುಪ್ರೀಂ ಕೋರ್ಟ್ ಆದೇಶದನ್ವಯ ಪಡಿತರ ಕಾರ್ಡ್ ನಲ್ಲಿರುವ ಪ್ರತಿಯೊಬ್ಬರೂ ಇಕೆವೈಸಿ ಮಾಡಿಸಿಕೊಳ್ಳಬೇಕು ಎಂಬ ನಿಯಮವನ್ನು ಇಲಾಖೆ ಜಾರಿಗೆ ತಂದಿದೆ.
ರೇಷನ್ ಕಾರ್ಡ್​ನಲ್ಲಿರುವ ಪ್ರತಿ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಆಧಾರ್ ದೃಢೀಕರಣ ಮಾಡಿಸಬೇಕು. ವರ್ತಕರಿಗೆ ಇಲಾಖೆಯಿಂದ ನೀಡಿರುವ ಲಾಗಿನ್ ಐಡಿಯಲ್ಲೇ ಇಕೆವೈಸಿ ಮಾಡಿಸತಕ್ಕದು. ಕಾರ್ಡ್ ಸಂಖ್ಯೆಯನ್ನು ನಮೂದಿಸಿದರೆ ಎಷ್ಟು ಸದಸ್ಯರು ಇದ್ದಾರೆ ಎಂಬುದರ ಬಗ್ಗೆ ಮಾಹಿತಿ ಸಿಗುತ್ತದೆ. ಬಳಿಕ ಎಲ್ಲರೂ ಆಧಾರ್ ದೃಢೀಕರಣ ಮಾಡಿಸಬೇಕು. ಫಲಾನುಭವಿ ಮೃತಪಟ್ಟಿರುವ ಮತ್ತು ಬೇರೆ ಸ್ಥಳದಲ್ಲಿ ವಾಸಿಸುತ್ತಿರುವ ಬಗ್ಗೆ ದೃಢೀಕರಣ ವೇಳೆ ಲೆಕ್ಕ ಸಿಗಲಿದೆ. ನೈಜ ಫಲಾನುಭವಿಗಳನ್ನು ಗುರುತಿಸುವ ಸಲುವಾಗಿ ದೃಢೀಕರಣ ವೇಳೆ ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡದ(ಎಸ್ಟಿ) ಫಲಾನುಭವಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ನೀಡತಕ್ಕದ್ದು, ಎಲ್ಲ ಫಲಾನುಭವಿಗಳು ಗ್ಯಾಸ್ ಸಂಪರ್ಕದ ಮಾಹಿತಿಯನ್ನು ನೀಡಬೇಕು. ಈ ಕ್ರಮದಿಂದ ಫಲಾನುಭವಿಯ ಉಜ್ವಲ, ಅನಿಲ ಭಾಗ್ಯ ಮತ್ತು ಖಾಸಗಿ ಗ್ಯಾಸ್ ಏಜೆನ್ಸಿಗಳಿಂದ ಅನಿಲ ಸಂಪರ್ಕ ಪಡೆದಿರುವ ಬಗ್ಗೆ ಮಾಹಿತಿ ಸಿಗಲಿದೆ.
2019ರ ಜು.19ರಂದು ಪಡಿತರ ಕಾರ್ಡ್​ನಲ್ಲಿರುವ ಪ್ರತಿ ಸದಸ್ಯರು ಇಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಇಲಾಖೆ ಸುತ್ತೋಲೆ ಹೊರಡಿಸಿತು. ಆದರೆ, ಇದಕ್ಕೆ ಅಡ್ಡಗಾಲು ಹಾಕುತ್ತಿದ್ದ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ರಾಜ್ಯ ಪಡಿತರ ವಿತರಕ ಸಂಘವು ಕುಂಟು ನೆಪ ಹೇಳಿಕೊಂಡು ಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಡಿಸೆಂಬರ್​ವರೆಗೆ ಇಕೆವೈಸಿ ಪ್ರಕ್ರಿಯೆಯಲ್ಲಿ ಅಷ್ಟೇನೂ ಪ್ರಗತಿ ಕಾಣಲಿಲ್ಲ. ಈಗಿನವರೆಗೆ 1.6 ಕೋಟಿ ಅಂದರೆ ಶೇ.39 ಇಕೆವೈಸಿ ಆಗಿದೆ.
ಪ್ರತಿ ಫಲಾನುಭವಿಗೆ ನೀಡುವ 7 ಕೆಜಿ ಅಕ್ಕಿಯನ್ನು 10 ಲಕ್ಷ ಫಲಾನುಭವಿಗಳಿಗೆ ಗುಣಕಾರ ಮಾಡಿದರೆ 7 ಸಾವಿರ ಮೆಟ್ರಿಕ್ ಟನ್ ಆಗುತ್ತದೆ. 7 ಸಾವಿರ ಮೆಟ್ರಿಕ್ ಅನ್ನು ಪ್ರತಿ ಕೆಜಿಗೆ 30 ರೂ.ನಂತೆ ಲೆಕ್ಕ ಹಾಕಿದರೆ 21 ಕೋಟಿ ರೂ. ಆಗಲಿದೆ. ಒಂದು ವರ್ಷಕ್ಕೆ ಲೆಕ್ಕ ಹಾಕಿದರೆ 252 ಕೋಟಿ ರೂ. ಉಳಿತಾಯ ಆಗಲಿದೆ.
ಆರ್​.ಆರ್.ನಗರ ಟಿಕೆಟ್​ ಪಕ್ಕಾ ಆಗುತ್ತಿದ್ದಂತೆ ಡಿ.ಕೆ.ಶಿವಕುಮಾರ್​ ಮನೆಗೆ ತೆರಳಿದ ಕುಸುಮಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
