ಬೆಂಗಳೂರು:ವಯೋಮಾನ ದಾಖಲೆ ವಿಚಾರದಲ್ಲಿ ಗೊಂದಲ ಉಂಟಾಗಿ ಹಿರಿಯ ನಾಗರಿಕರಿಗೆ ನೀಡುತ್ತಿರುವ ವೃದ್ಧಾಪ್ಯ ವೇತನ ಸಕಾಲಕ್ಕೆ ತಲುಪುತ್ತಿಲ್ಲ ಎಂಬ ಕೂಗೆದ್ದಿದ್ದು, ಪ್ರಮಾಣ ಪತ್ರಕ್ಕೆ ಹಿರಿಯರು ಅಲೆದಾಡಬೇಕಾದ ಪರಿಸ್ಥಿತಿ ಬಂದೊದಗಿದೆ.
ಸಾಮಾಜಿಕ ಭದ್ರತಾ ಯೋಜನೆಯಾದ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ 60 ವರ್ಷ ಮೇಲ್ಪಟ್ಟ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯಡಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಧಾರ್ ಆಧಾರಿತ ಪಿಂಚಣಿ ವ್ಯವಸ್ಥೆ ರೂಪಿಸಲಾಗಿದ್ದು, ಫಲಾನುಭವಿಗಳ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಅಥವಾ ಅಂಚೆ ಖಾತೆಗೆ ಪಿಂಚಣಿ ಪಾವತಿಸುವ ವ್ಯವಸ್ಥೆ ಇದೆ. ರಾಜ್ಯದಲ್ಲಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯಡಿ ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಹಾಲಿ ವೃದ್ಧಾಪ್ಯ ವೇತನ ಮತ್ತು ಇತರೆ ಯೋಜನೆಗಳಡಿ ಮಾಸಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು 65 ವರ್ಷದ ನಂತರ ಮಾಸಿಕ 1200 ರೂ.ಪಿಂಚಣಿ ಪಡೆಯುವ ಕುರಿತು ಫಲಾನುಭವಿಗಳ ನಿರ್ವಹಣಾ ವ್ಯವಸ್ಥೆ
(ಬೆನಿಫಿಷರಿ ಮ್ಯಾನೇಜ್​ವೆುಂಟ್ ಸಿಸ್ಟಮ್ ತಂತ್ರಾಂಶದಲ್ಲಿ ದಾಖಲೀಕರಣ ವ್ಯವಸ್ಥೆ ನಡೆದಿದೆ. ಸರ್ಕಾರ ವಯಸ್ಸಿನ ದೃಢಿಕರಣಕ್ಕಾಗಿ ಜಿಲ್ಲಾ ಶಸ್ತ್ರ ಚಿಕಿತ್ಸಕರಿಂದ ದೃಢೀಕರಣ ಬಯಸುತ್ತಿದೆ. ಆಧಾರ್ ಕಾರ್ಡ್​ನಲ್ಲಿರುವ ವ್ಯಕ್ತಿಯ ಜನ್ಮ ದಿನಾಂಕ ಆಧಾರಿತ ವಯಸ್ಸನ್ನು ಪರಿಗಣಿಸರಿರುವುದು ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ ವಯೋವೃದ್ಧರು ಜಿಲ್ಲಾ ಶಸ್ತ್ರ ಚಿಕಿತ್ಸಕರ ಬಳಿ ಅಲೆಯುವ ಪರಿಸ್ಥಿತಿ ನಿರ್ವಣವಾಗಿದೆ.
ಆಧಾರ್ ಬಳಕೆ ಏಕಿಲ್ಲ: ಕೇಂದ್ರದ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧಿಕೃತ ಜ್ಞಾಪನಾ ಪತ್ರದ (2018ರ ಡಿಸೆಂಬರ್​ನಲ್ಲಿ) ಪ್ರಕಾರ ಆಧಾರ್ ಕಾರ್ಡ್ ನಲ್ಲಿರುವ ಜನ್ಮ ದಿನಾಂಕದ ಮಾಹಿತಿಯನ್ನು ವಯಸ್ಸಿನ ದಾಖಲೆಯಾಗಿ ಪರಿಗಣಿಸುವಂತಿಲ್ಲ. ಹೀಗಾಗಿ ವಯಸ್ಸಿನ ದೃಢೀಕರಣಕ್ಕಾಗಿ ಮತದಾರರ ಗುರುತಿನ ಚೀಟಿಯಲ್ಲಿರುವ ಜನ್ಮ ದಿನಾಂಕದೊಂದಿಗೆ ಪರಿಶೀಲಿಸಲಾಗುತ್ತಿದೆ. ಆದರೆ, ವಯಸ್ಸಿನ ನಿಖರತೆಯ ಸಂದೇಹ ಉಂಟಾದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಂದ ದೃಢೀಕರಣ ಪಡೆಯಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ, ರಾಜ್ಯದ ಸಾಕಷ್ಟು ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಮಾಹಿತಿ ಇಲ್ಲ, ಅವರು ಜಿಲ್ಲಾ ಚಿಕಿತ್ಸಕರ ಬಳಿ ಕಳಿಸುತ್ತಿದ್ದಾರೆ.
ಫಲಾನುಭವಿಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
