
ಬೆಂಗಳೂರು:ರಾಜ್ಯಕ್ಕೆ ಭೇಟಿ ನೀಡಿರುವ ಗೃಹ ಸಚಿವ ಅಮಿತ್ ಷಾ ಅವರು ಚುನಾವಣಾ ಪ್ರಚಾರ ಕಣದಲ್ಲಿ ಸಂಚಲನ ತಂದಿರುವುದಲ್ಲದೆ, ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಬೂಸ್ಟರ್ ಡೋಸ್ ನೀಡಿದಂತಾಗಿದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಪಡೆದಷ್ಟೆ ಸ್ಥಾನಗಳನ್ನು ಈ ಬಾರಿಯೂ ಗಿಟ್ಟಿಸಿಕೊಳ್ಳಬೇಕು ಎನ್ನುವ ಉಮೇದಿನಲ್ಲಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಅಮಿತ್ ಷಾ ಭೇಟಿ ಹೊಸ ಉತ್ಸಾಹವನ್ನು ತುಂಬಿದೆ.ಬಿಜೆಪಿ ಮತ್ತು ಜೆಡಿಎಸ್ ಜೊತೆಗೆ ಸಮನ್ವಯತೆ ಸಾಧಿಸಲು ಸತತ ಪ್ರಯತ್ನ ನಡೆಸಿರುವ ಹೈಕಮಾಂಡ್ ಈ ನಿಟ್ಟಿನಲ್ಲಿ ಅಮಿತ್ ಷಾ ಅವರಿಗೂ ಜವಾಬ್ದಾರಿ ಹೊರೆಸಿದೆ. ಆ ಹಿನ್ನೆಲೆಯಲ್ಲಿಯೇ ನಗರದ ಹೋಟೆಲ್‌ನಲ್ಲಿ ಬೀಡು ಬಿಟ್ಟಿದ್ದ ಅಮಿತ್ ಷಾ, ಸತತ ಸಭೆಗಳನ್ನು ನಡೆಸುವ ಮೂಲಕ ಎರಡೂ ಪಕ್ಷಗಳ ನಡುವೆ ಸಮಹತ ತರಲು ಪ್ರಯತ್ನಿಸಿದ್ದಾರೆ. ಅಷ್ಟೆ ಅಲ್ಲ, ಸ್ವತಃ ಪ್ರಚಾರಕ್ಕೂ ಇಳಿದಿರುವ ಅಮಿತ್ ಷಾ, ರಾಮನಗರ ಜಿಲ್ಲೆಯ ಮೂಲಕವೇ ಚುನಾವಣಾ ಪ್ರಚಾರಕ್ಕೂ ಮುಂದಾಗುವ ಮೂಲಕ ಮೈತ್ರಿ ಮಹತ್ವವನ್ನು ಸಾರಿದ್ದಾರೆ.ಪ್ರತ್ಯೇಕವಾಗಿ ನಡೆದ ಸಭೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಹುರುಪು ತುಂಬುವ ಕೆಲಸ ಮಾಡಿರುವುದು ವಿಶೇಷ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 4 =
Remember me
