
ಬೆಂಗಳೂರು:ಉತ್ತರ ಕರ್ನಾಟಕದಲ್ಲಿ ಈ ಬಾರಿಯೂ ಉತ್ತಮ ಸಾಧನೆ ಮಾಡುವ ನಿರೀಕ್ಷೆಯಲ್ಲಿರುವ ಬಿಜೆಪಿ ಕನಿಷ್ಠ 10 ರಿಂದ 12 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿರುವ ಕಾರಣ, ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿನ ಪರಿಸ್ಥಿತಿ ಬೇರೆಯೇ ಇದೆ. ಆದ ಕಾರಣ ಅಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವುದು ಸಾಹಸವಾಗಬಹುದು. ಆದರೆ ಕನಿಷ್ಠ ಸ್ಥಾನಗಳಿಗೇನು ತೊಂದರೆ ಇಲ್ಲ.ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಈ ಬಾರಿಯೂ ಪ್ರವಾಸ ಮಾಡಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದು ಪರಿಣಾಮಕಾರಿಯಾಗಿದೆ. ಈ ಬಾರಿಯೂ ಬಿಜೆಪಿ ಒಂದು ತಂಡವಾಗಿ ಕೆಲಸ ಮಾಡುವಲ್ಲಿ ಯಶಸ್ವಿಯಾಗಿರುವುದರಿಂದ ನಾವು ನಿರೀಕ್ಷೆಯಷ್ಟು ಸ್ಥಾನಗಳು ಬರಬಹುದು ಎನ್ನುವುದು ಬಿಜೆಪಿ ನಾಯಕರ ಲೆಕ್ಕಾಚಾರ.ಚುನಾವಣೆ ೋಷಣೆಯಾದ ಬಳಿಕ ನಡೆದ ಬೆಳವಣಿಗೆಯಲ್ಲಿ ಮತ್ತು ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ನಡೆದ ಕೆಲ ವ್ಯತ್ಯಾಸದಿಂದ ಒಂದಷ್ಟು ಗೊಂದಲಗಳು ಉಂಟಾಗಿದ್ದು ನಿಜ. ಆದರೆ, ನಂತರದಲ್ಲಿ ಈ ಅಸಮಾಧಾನಗಳನ್ನು ಪರಸ್ಪರ ಮಾತನಾಡುವ ಮೂಲಕ ಸರಿಪಡಿಸಲಾಯಿತು. ಅಸಮಾಧಾನಿತರ ಮನೆಗೆ ತೆರಳಿ ಎಲ್ಲವನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗಿದೆ. ಹಾಗಾಗಿ ಚುನಾವಣೆ ಪ್ರಚಾರದ ಹೊತ್ತಿಗೆ ಬಿಜೆಪಿ ಒಂದು ತಂಡವಾಗಿ ಕೆಲಸ ಮಾಡಲು ಸಾಧ್ಯವಾಗಿದೆ. ರಾಜ್ಯದ ಬಹುತೇಕ ಎಲ್ಲ ನಾಯಕರು, ಮಾಜಿ ಸಚಿವರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷಕ್ಕೆ ಬಲ ತುಂಬುವ ಕೆಲಸವನ್ನು ಮಾಡಲಾಗಿದೆ. ಹೊಸ ಅಭ್ಯರ್ಥಿಗಳು ಕಣದಲ್ಲಿದ್ದರೂ ಕೂಡ ಗೆಲುವಿಗೆ ಸಮಸ್ಯೆಗಳೇನೂ ಆಗುವುದಿಲ್ಲ. ಇನ್ನು ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಸ್ಥಳೀಯ ನಾಯಕರುಗಳ ನಡುವೆ ಪರಸ್ಪರ ವಿಶ್ವಾಸ ಬೆಸೆಯಲು ಮಹತ್ವದ ಪಾತ್ರ ವಹಿಸಿದ್ದಾರೆ. ಆದ್ದರಿಂದ ಈ ಬಾರಿ ಉತ್ತಮ ಲಿತಾಂಶ ಪಡೆಯುವ ನಿರೀಕ್ಷೆಯಲ್ಲಿದ್ದೇವೆ ಎಂದು ಬಿಜೆಪಿ ನಾಯಕರು ತುಂಬು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + two =
Remember me
