
ಬೆಂಗಳೂರು:ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಇನ್ನೂ ಎರಡೂ ಪಕ್ಷಗಳು ಒಮ್ಮತಾಭಿಪ್ರಾಯಕ್ಕೆ ಬರಲು ಸಾಧ್ಯವಾಗಿಲ್ಲ. ಆದರೆ, ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗಬೇಕು ಎನ್ನುವ ಅಭಿಪ್ರಾಯ ಎರಡೂ ಪಕ್ಷಗಳಲ್ಲೂ ಇದೆ.ಒಂದೆಡೆ ಚುನಾವಣೆ ೋಷಣೆಗೂ ಮುನ್ನವೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ೋಷಣೆ ಮಾಡಿಕೊಂಡು ಪ್ರಚಾರ ನಡೆಸುತ್ತಿದೆ. ಆದರೆ ಬಿಜೆಪಿ ಇನ್ನೂ ತನ್ನ ಸಮರ ಸೇನಾನಿಗಳು ಯಾರು ಎನ್ನುವುದನ್ನು ೋಷಣೆ ಮಾಡಿಲ್ಲ.ಮತ್ತೊಂದೆಡೆ ಜೆಡಿಎಸ್‌ನಿಂದ ಗೆದ್ದಿದ್ದ ಭೋಜೇಗೌಡ ಅವರು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ೋಷಣೆ ಮಾಡಿಕೊಂಡು ಪ್ರಚಾರ ನಡೆಸುತ್ತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ.ಭೋಜೇಗೌಡರ ಎದುರು ಕಡಿಮೆ ಅಂತರದಲ್ಲಿ ಸೋತಿದ್ದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಟಿಕೆಟ್ ನೀಡಬೇಕು ಎನ್ನುವುದು ಬಿಜೆಪಿ ಸ್ಥಳೀಯ ಮುಖಂಡರ ಪ್ರಬಲವಾದವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ತನ್ನ ಸೋಲಿಗೆ ಜೆಡಿಎಸ್ ಕೂಡ ಕಾರಣ ಎನ್ನುವ ಆಕ್ರೋಶ ಮಾಜಿ ಸಚಿವ ಸಿ.ಟಿ.ರವಿ ಅವರಿಗಿದೆ. ಜೆಡಿಎಸ್‌ನವರು ಕಾಂಗ್ರೆಸ್ ಜೊತೆಗೆ ಕೈ ಜೋಡಿಸದೆ ಹೋಗಿದ್ದರೆ, ತನ್ನ ಗೆಲುವಿನ ಹಾದಿ ಸುಲುಭವಾಗಿತ್ತು ಎನ್ನುವುದು ರವಿ ಅವರ ವಾದವಾಗಿದ್ದು, ಅದಕ್ಕೆ ಹಲವು ಬಿಜೆಪಿ ನಾಯಕರ ಸಹಮತವೂ ಇದೆ. ಆದರೆ, ಮೈತ್ರಿ ಮುಂದುವರಿಸಬೇಕಾದರೆ ಆ ಕ್ಷೇತ್ರವನ್ನು ಬಿಟ್ಟುಕೊಡಲೇಬೇಕಾದ ಅನಿವಾರ್ಯತೆ ಬಿಜೆಪಿಗೆ ಎದುರಾಗಿದೆ.ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದ ಮರಿತಿಬ್ಬೇಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಅಲ್ಲಿ ಹೊಸ ಅಭ್ಯರ್ಥಿಗೆ ಜೆಡಿಎಸ್ ತಲಾಷ್ ನಡೆಸಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲ್ಯವಿದ್ದು, ಇದನ್ನು ತನಗೆ ಬಿಟ್ಟುಕೊಡಬೇಕು ಎಂದು ಪಟ್ಟು ಹಿಡಿದಿರುವುದು ಬಿಜೆಪಿಗೆ ತಲೆನೋವಾಗಿದೆ.ಈ ಎರಡೂ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಮಾತ್ರ, ಇನ್ನುಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡದೆ ಇರಲು ನಿರ್ಧರಿಸಿದೆ. ಇನ್ನೊಂದೆರಡು ದಿನದಲ್ಲಿ ಈ ಮೈತ್ರಿಯ ಮಾತುಕತೆ ಅಂತಿಮವಾಗುವ ನಿರೀಕ್ಷೆ ಇದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:five × one =
Remember me
