
ಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಿಂದಾಗಿ 19 ಸ್ಥಾನ ಗೆದ್ದಿರುವ ಜೋಶ್‌ನಲ್ಲಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರುಗಳು, ತಾಪಂ, ಜಿಪಂ, ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೈತ್ರಿಯ ಹೆಜ್ಜೆ ಇಡಲು ಗಟ್ಟಿಯಾಗಿ ನಿರ್ಧರಿಸಿವೆ.ಅರಮನೆ ಆವರಣದಲ್ಲಿ ಹೊಸದಾಗಿ ಆಯ್ಕೆಯಾಗಿರುವ ಎನ್‌ಡಿಎ ಸಂಸದರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಉಭಯ ಪಕ್ಷಗಳ ನಾಯಕರು, ಮುಂದೆಯೂ ಮೈತ್ರಿ ರಾಜಕಾರಣವನ್ನೆ ಮುಂದುವರಿಸುವುದಾಗಿ ೋಷಿಸಿದರು.2006ರಲ್ಲಿಯೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಹೊಸ ರಾಜಕಾರಣ ಪ್ರಾರಂಭವಾಯಿತು. ಅದೇ ಮೈತ್ರಿಯನ್ನು ಮುಂದುವರಿಸಿಕೊಂಡು ಬಂದಿದ್ದರೆ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುತ್ತಿರಲಿಲ್ಲ ಎನ್ನುವುದನ್ನು ವೇದಿಕೆಯಲ್ಲಿ ಪ್ರತಿಪಾದಿಸಲಾಯಿತು.ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಮತ್ತು ಮಖಂಡರು ಪರಸ್ಪರ ಹೊಂದಾಣಿಕೆಯಿಂದ ಅಭ್ಯರ್ಥಿಗಳ ಗೆಲುವಿಗಾಗಿ ದುಡಿದಿರುವುದನ್ನು ಮತದಾರರು ಪುರಸ್ಕರಿಸಿ ಮತ ನೀಡುವ ಮೂಲಕ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ ಎಂದು ಪ್ರಸ್ತಾಪಿಸಿದ ನಾಯಕರು, ಗೆಲ್ಲಿಸಿದ ಮತದಾರ ಪ್ರಭುಗಳಿಗೆ ಅಭಿನಂದನೆ ಸಲ್ಲಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
