
ಬೆಂಗಳೂರು:ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಎಲ್ಲಿಯೂ ಗೊಂದಲ ಬಾರದ ರೀತಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎಚ್ಚರದ ಹೆಜ್ಜೆ ಇಡುತ್ತಿದ್ದಾರೆ.ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು ಎನ್ನುವ ೋಷ ವಾಕ್ಯದ ಅಡಿಯಲ್ಲಿ ಎರಡೂ ಪಕ್ಷದ ನಾಯಕರು ತಮ್ಮ ಪರಸ್ಪರ ರಾಗ ದ್ವೇಷ ಮರೆತು ಒಟ್ಟಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದು ವಿಶೇಷ.ಜೆಡಿಎಸ್ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಜುಗರ ಅನುಭವಿಸುವ ಸ್ಥಿತಿ ಇದೆ. ಇದೇ ರೀತಿಯಲ್ಲಿ ಜೆಡಿಎಸ್ ನೆಲೆ ಇರುವ ತುಮಕೂರು, ಚಿಕ್ಕಬಳ್ಳಾಪುರ, ಬೀದರ್, ವಿಜಯಪುರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತದ್ವಿರುದ್ದ ಪರಿಸ್ಥಿತಿ ಇದೆ.ಚುನಾವಣೆ ಹೊತ್ತಿನಲ್ಲಿ ಯಾವುದೇ ಗೊಂದಲ ಮಾಡಿಕೊಂಡರೂ, ಅದು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಬಹುದು ಎನ್ನುವ ಹಿನ್ನೆಲೆಯಲ್ಲಿ ಎಲ್ಲಾ ಕಡೆಯಲ್ಲಿಯೂ ನಾಯಕರು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದಾರೆ.ಮಂಡ್ಯದಲ್ಲಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಖುದ್ದು ಹಾಜರಿದ್ದರೆ, ಹಾಸನದಲ್ಲಿ ಪ್ರಜ್ವಲ್ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಹಾಜರಿದ್ದು ಗೊಂದಲವಾಗದಂತೆ ನೋಡಿಕೊಂಡು ಪರಸ್ಪರ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಜೆಡಿಎಸ್ ಮುಖಂಡರು, ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಕಡ್ಡಾಯವಾಗಿ ಹಾಜರಿರುವಂತೆ ನೋಡಿಕೊಳ್ಳಲಾಗಿದೆ.ನಾಮಪತ್ರ ಸಲ್ಲಿಕೆಯ ಬಗ್ಗೆ ಬಿಜೆಪಿ ಕೇಂದ್ರ ಕಚೇರಿಗೂ ವರದಿ ನೀಡುವಂತೆ ತಾಕೀತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 13 =
Remember me
