ಬೆಂಗಳೂರು:ಲೋಕಸಭಾ ಚುನಾವಣೆಯ ಆರ್ಭಟ ಶುರುವಾಗಿದೆ. ಚುನಾವಣಾ ಆಯೋಗ ಕಳೆದ ಶನಿವಾರ ಎಲೆಕ್ಷನ್ ಡೇಟ್ ಪ್ರಕಟ ಮಾಡಿದ್ದೇ ತಡ ಮಾದರಿ ನೀತಿ ಸಂಹಿತೆ ಕೂಡಾ ಜಾರಿ ಆಗಿದೆ. ಚುನಾವಣಾ ನೀತಿ ಸಂಹಿತೆ ರಾಜಕಾರಣಿಗಳು, ಅಧಿಕಾರಿಗಳಿಗೆ ಮಾತ್ರವಲ್ಲ ಜನ ಸಾಮಾನ್ಯರಿಗೂ ಅನ್ವಯ ಆಗುತ್ತದೆ.
ಇದನ್ನೂ ಓದಿ:ವ್ಯಕ್ತಿಯ ತಲೆ ಬೋಳಿಸಿ, ಮೂತ್ರ ಕುಡಿಸಿದ ಕಿಡಿಗೇಡಿಗಳು? ಕಾರಣ ಕೇಳಿದ್ರೆ ಬೆಚ್ಚಿಬೀಳ್ತಿರಾ!
ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಭೆ-ಸಮಾರಂಭ ಅಥವಾ ಮದುವೆ ಕಾರ್ಯಕ್ರಮ ನಡೆಸಬೇಕಿದ್ದರೆ ಸರ್ಕಾರದಿಂದ ಅನುಮತಿ ಪಡೆಯೋದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.
ಸಂವಿಧಾನ ರಕ್ಷಿಸುವ, ಗೌರವಿಸುವ ನಾಯಕನಿಗಿರಲಿ ನಿಮ್ಮ ಅಮೂಲ್ಯ ಮತ
ಲೋಕಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆ ಸಾರ್ವಜನಿಕರು ಯಾವುದೇ ಸಭೆ- ಸಮಾರಂಭ ಅಥವಾ ಕಾರ್ಯಕ್ರಮಗಳನ್ನು ನಡೆಸಿದರೆ ಅದಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಜೊತೆಗೆ ಅಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆಗಳನ್ನು ಮಾಡಬಾರದು. ರಾಜಕೀಯ ಪಕ್ಷಗಳ ಬಾವುಟ, ಚಿಹ್ನೆಗಳನ್ನು…pic.twitter.com/2WsS1zeuAg
— CM of Karnataka (@CMofKarnataka)March 20, 2024

ಮದುವೆ ಮಾತ್ರವಲ್ಲ ಯಾವುದೇ ಜಾತ್ರೆ, ಸಮಾರಂಭ, ನಡೆಸೋದಕ್ಕೆ ತಹಶೀಲ್ದಾರ್ ಕಚೇರಿಯಲ್ಲಿ ಇರುವ ಎಆರ್‌ಒಗಳ ಬಳಿ ಮೊದಲೇ ಅನುಮತಿ ಪಡೆಯಬೇಕಿದೆ. ಇನ್ನು ಈ ಕಾರ್ಯಕ್ರಮಗಳಿಗೆ ರಾಜಕಾರಣಿಗಳನ್ನು ಆಹ್ವನಿಸಬಾರದು.
ಕಾರ್ಯಕ್ರಮಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸುವುದು, ರಾಜಕೀಯ ಪಕ್ಷಗಳ ಬಾವುಟ, ಚಿಹ್ನೆಗಳನ್ನು ಬಳಸುವುದು, ಮತಯಾಚಿಸುವುದು ಕಾನೂನು ಬಾಹಿರವಾಗಿದೆ. ಮತದಾರರಿಗೆ ಭರವಸೆ, ಆಮಿಷ ಒಡ್ಡುವ ಕುರಿತು ದೂರು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
ಮಗಳನ್ನೇ ಕತ್ತು ಹಿಸುಕಿ ಕೊಂದು ಪ್ರಾಣಬಿಟ್ಟಳು ಎಂದು ಅಳುತ್ತಲೇ ಹೊರಬಂದ ಪಾಪಿ ತಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 3 =
Remember me
