ಬೆಂಗಳೂರು: ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಕರಡು
ಮತದಾರರ ಪಟ್ಟಿ ಪ್ರಕಟಗೊಳಿಸಿದ್ದು, ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತದೆ. 2024ರ ಜನವರಿ 1ರೊಳಗೆ ತಿದ್ದುಪಡಿ ಮಾಡಿಕೊಳ್ಳಲು, ಹೆಸರು ಸೇರ್ಪಡೆಗೆ ಅವಕಾಶ ಇರಲಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಡಿಸೆಂಬರ್ 9ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರಲಿದೆ. ಅದೇ ರೀತಿ ನಾಲ್ಕು ವಿಶೇಷ ಅಭಿಯಾನಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಕಳೆದ ಬಾರಿ ನಡೆಸಿದ ಪರಿಷ್ಕರಣೆ ಬಳಿಕ ಅಂತಿಮವಾಗಿ 5,08,53,845 ಮತದಾರರಿದ್ದರು. ಈಗ ಕರಡು ಮತದಾರರ ಪಟ್ಟಿಯಲ್ಲಿ 5,33,77,162 ಮತದಾರರಿದ್ದಾರೆ. ಇಡೀ ರಾಜ್ಯದಲ್ಲಿ ಬೆಂಗಳೂರು ದಕ್ಷಿಣದಲ್ಲಿ ಅತೀ ಹೆಚ್ಚು ಮತದಾರರಿದ್ದರೆ ಶೃಂಗೇರಿಯಲ್ಲಿ ಕಡಿಮೆ ಮತದಾರರಿದ್ದಾರೆ ಎಂದು ವಿವರಿಸಿದರು.
ಪ್ರಸ್ತುತ 13,45,707 ಯುವ ಮತದಾರರಿದ್ದು, ತೃತೀಯ ಲಿಂಗಿಗಳು 4,896, ಸಾಗರೋತ್ತರ ಮತದಾರರು 3,055 ಮತದಾರರು ಇದ್ದಾರೆ.
ಮುಖ್ಯ ಚುನಾವಣಾಧಿಕಾರಿ ವೆಬ್ ಸೈಟ್‌ನಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಇಲ್ಲಿ ಸಾರ್ವಜನಿಕರು ಪರಿಶೀಲಿಸಿಕೊಳ್ಳಬಹುದು. ಹಾಗೆಯೇ ತಿದ್ದುಪಡಿ ಅಗತ್ಯವಿದ್ದರೆ ಪ್ರತಿ ವಿಧಾನಸಭಾ ಕ್ಷೇತ್ರದ ಅಧಿಸೂಚಿತ ನೋಂದಣಾಧಿಕಾರಿ ಅಥವಾ ಸಹಾಯಕ ನೋಂದಣಾಧಿಕಾರಿ ನಿಗದಿತ ನಮೂನೆಗಳಲ್ಲಿ ಸಲ್ಲಿಸಬೇಕಾಗುತ್ತದೆ.
ಹೆಸರು ತಪ್ಪಾಗಿರುವುದು, ಫೋಟೋ ವ್ಯತ್ಯಾಸ ಇರುವುದು, ಮೊಬೈಲ್ ಸಂಖ್ಯೆ, ಲಿಂಗ ತಿದ್ದುಪಡಿ, ಹುಟ್ಟಿದ ದಿನಾಂಕ ಬದಲಾವಣೆ, ವಿಳಾಸ ಬದಲಾವಣೆ ಹೀಗೆ ಹಲವು ರೀತಿಯ ತಿದ್ದುಪಡಿಗೆ ಅವಕಾಶವಿರುತ್ತದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + 15 =
Remember me
