
ಬೆಂಗಳೂರು:ಲೋಕಸಭಾ ಚುನಾವಣೆ ಪ್ರಚಾರಕ್ಕೆ ಈ ಬಾರಿ ಯಾಕೋ ಸಿನಿಮಾ ನಟ ನಟಿಯರಿಗೆ ಡಿಮ್ಯಾಂಡ್ ಬರಲೇ ಇಲ್ಲ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರಕ್ಕೆ ಬಹುಪಾಲು ನಟ ನಟಿಯರಿಗೆ ಒಂದಲ್ಲ ಒಂದು ರೀತಿಯಲ್ಲಿ ಬೇಡಿಕೆ ಇತ್ತು. ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ದರ್ಶನ್ ಮಾತ್ರ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕಾಣಿಸಿಕೊಂಡರು.ಇನ್ನು ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಪರವಾಗಿ ಶಿವಮೊಗ್ಗದಲ್ಲಿ ಮೊಕ್ಕಾಂ ಹೂಡಿದ್ದರು. ಅವರ ಪರವಾಗಿ ದುನಿಯಾ ವಿಜಿ, ಯೋಗಿ ಮತ್ತಿತರರು ಪ್ರಚಾರ ಮಾಡಿದರು. ಇನ್ನುಳಿದಂತೆ ಎಲ್ಲಿಯೂ ಸಿನಿಮಾ ನಟ ನಟಿಯರು ಹೆಚ್ಚಾಗಿ ಕಾಣಿಸಿಕೊಳ್ಳಲಿಲ್ಲ.ಇನ್ನು ಪಕ್ಷದ ಪರವಾಗಿ ಬಿಜೆಪಿಯಲ್ಲಿ ತಾರಾ ಅನೂರಾಧ, ಶೃತಿ, ಮಾಳವಿಕ ಕೆಲವು ಕಡೆಯಲ್ಲಿ ಪ್ರಚಾರ ಮಾಡಿದರು. ಅದೇ ರೀತಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿರುವ ಸಾಧುಕೋಕಿಲಾ ಮತ್ತಿತರರು ಪ್ರಚಾರ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
