ಬೆಂಗಳೂರು:ವಿಧಾನ ಪರಿಷತ್ತಿನ 2 ಶಿಕ್ಷಕರ ಕ್ಷೇತ್ರ ಹಾಗೂ 2 ಪದವೀಧರರ ಕ್ಷೇತ್ರಗಳಿಗೆ ಸೋಮವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ವಾಯವ್ಯ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಪದವೀಧರರ ಕ್ಷೇತ್ರಗಳ ಚುನಾವಣೆಗೆ ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿದೆ. ನಾಲ್ಕು ಕ್ಷೇತ್ರದಲ್ಲಿ ಒಟ್ಟು 607 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 45 ಪುರುಷ ಹಾಗೂ 4 ಮಹಿಳೆ ಸೇರಿ 49 ಮಂದಿ ಚುನಾವಣಾ ಕಣದಲ್ಲಿದ್ದಾರೆ.
ವಿಶೇಷ ಸಾಂರ್ದಭಿಕ ರಜೆ:ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು, ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಷ್​ವೆುಂಟ್​ಗಳಲ್ಲಿ ಕಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು – ಮತದಾನ ಮಾಡಲು ಅನುಕೂಲವಾಗುವಂತೆ ಜೂ.13 ರಂದು ವಿಶೇಷ ಸಾಂರ್ದಭಿಕ ರಜೆ ಸೌಲಭ್ಯ ನೀಡಲಾಗಿದೆ.
ಮತ ಎಣಿಕೆ ಕೇಂದ್ರಗಳು:ಜೂ.15 ರಂದು ವಾಯವ್ಯ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ನಡೆಯಲಿದೆ. ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆ ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ಮ್ಯಾನೇಜ್​ವೆುಂಟ್ ಕಾಲೇಜಿನಲ್ಲಿ ನಡೆಯಲಿದೆ.
ಮೈಸೂರು:ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಸಂದರ್ಭದಲ್ಲಿ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಗಳಲ್ಲಿ ಗಾಂಜಾವನ್ನೂ ವಶಪಡಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ. ಮತದಾರರಿಗೆ ಆಮಿಷವೊಡ್ಡಲು ಹಣ, ಹೆಂಡ, ಸೀರೆ ಇನ್ನಿತರ ವಸ್ತುಗಳನ್ನು ಹಂಚಲಾಗುತ್ತದೆ. ಆದರೆ, ಮೊದಲ ಬಾರಿಗೆ ಗಾಂಜಾವನ್ನೂ ಬಳಕೆ ಮಾಡಲಾಗಿದೆ. 71.72 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಈವರೆಗೆ 516 ಪ್ರಕರಣಗಳು ದಾಖಲಾಗಿವೆ. ಚಾಮರಾಜನಗರದಲ್ಲಿ 162, ಹಾಸನದಲ್ಲಿ 63, ಮಂಡ್ಯದಲ್ಲಿ 178, ಮೈಸೂರಿನಲ್ಲಿ 113 ಪ್ರಕರಣ ದಾಖಲಾಗಿವೆ.

ಬೆಳಗಾವಿ:ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ವೈಯಕ್ತಿಕ ಲಾಭಕ್ಕಾಗಿ ರಾಷ್ಟ್ರಲಾಂಛನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ದೂರಿನಡಿ ಚುನಾವಣಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ವಿವರಣೆ ಕೇಳಿ ಶನಿವಾರ ನೋಟಿಸ್ ನೀಡಿದ್ದಾರೆ. ಬಸವರಾಜ ಹೊರಟ್ಟಿ ಅವರ ಕುರಿತಾಗಿ ಬರೆಯಲಾದ ‘ಬಸವರಾಜ ಪಥ’, ಸಂಘರ್ಷ ಹೋರಾಟ ಸಾಧನೆ’ ಎಂಬ ಎರಡು ಪುಸ್ತಕಗಳಲ್ಲಿ ರಾಷ್ಟ್ರಲಾಂಛನ, ರಾಜ್ಯ ಲಾಂಛನ ಹಾಗೂ ವಿಧಾನ ಪರಿಷತ್ ಸಭಾಪತಿ ಪೀಠದ ಚಿತ್ರ ಗಳನ್ನು ಮುದ್ರಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹುಬ್ಬಳ್ಳಿಯ ರಾಷ್ಟ್ರೀಯ ಸ್ವಾಭಿಮಾನಿ ಶಿಕ್ಷಕರ ಸಂಘದ ಸಹ ಸಂಚಾಲಕ ಎಂ. ಭರತ ಶುಕ್ರವಾರ ದೂರು ನೀಡಿದ್ದರು.
ಚುನಾವಣೆ ಪ್ರಚಾರಕ್ಕೆ ಸಾಂವಿಧಾನಿಕ ಪೀಠದ ಚಿತ್ರ ದುರ್ಬಳಕೆ ವಿಚಾರವಾಗಿ ಚುನಾವಣೆ ಆಯೋಗದಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಜಾರಿ ಮಾಡಿದರೆ ಉತ್ತರ ನೀಡುತ್ತೇನೆ. ಕಾನೂನು ಪ್ರಕಾರ ಏನಾಗುತ್ತದೆ ನೋಡೋಣ.
|ಬಸವರಾಜ ಹೊರಟ್ಟಿಮಾಜಿ ಸಭಾಪತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
