ಬೆಂಗಳೂರು:ವಿಧಾನ ಪರಿಷತ್ತಿಗೆ ಸದ್ಯದಲ್ಲೇ ಖಾಲಿ ಆಗುತ್ತಿರುವ ಆರು ಸ್ಥಾನಗಳಿಗೆ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗ ವೇಳಾ ಪಟ್ಟಿ ಬಿಡುಗಡೆ ಮಾಡಿದೆ.
ಮೂರು ಪದವೀಧರರ ಕ್ಷೇತ್ರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಜೂ.3 ರಂದು ಚುನಾವಣೆ ನಡೆಯಲಿದೆ. ಈಶಾನ್ಯ ಪದವೀಧರರ ಕ್ಷೇತ್ರ ಡಾ.ಚಂದ್ರಶೇಖರ ಬಿ.ಪಾಟೀಲ್, ನೈರುತ್ಯ ಪದವೀಧರರ ಕ್ಷೇತ್ರ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರರ ಕ್ಷೇತ್ರ ಎ. ದೇವೇಗೌಡ,ಆಗ್ನೇಯ ಶಿಕ್ಷಕರ ಕ್ಷೇತ್ರ ವೈ.ಎ.ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರ ಎಸ್.ಎಲ್.ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಅವರ ಅಧಿಕಾರಾವಧಿ ಜೂ.21ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ೋಷಣೆಮಾಡಲಾಗಿದೆ.
ಅಧಿಸೂಚನೆ ಪ್ರಕಟಿಸುವ ದಿನ-ಮೇ 9ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ-ಮೇ 16ನಾಮಪತ್ರ ಪರಿಶೀಲನೆ-ಮೇ 17ನಾಮಪತ್ರ ಹಿಂಪಡೆಯಲು ಕೊನೆಯ ದಿನ-ಮೇ 20ಮತದಾನ ದಿನ-ಜೂ.3ಮತ ಎಣಿಕೆ-ಜೂ.6
ಮತದಾನದ ಸಮಯ: ಬೆಳಗ್ಗೆ 8 ರಿಂದ ಸಂಜೆ 4
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
