
ಬೆಂಗಳೂರು:ಮೈತ್ರಿ ಧರ್ಮದ ಪ್ರಕಾರ ಜೆಡಿಎಸ್ ಪ್ರಾಬಲ್ಯವಿರುವ ರಾಜ್ಯದ ಜಿಲ್ಲೆಗಳಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೋಡಿ ಚುನಾವಣಾ ಪ್ರಚಾರ ಕೈಗೊಳ್ಳಲಿದೆ.ದೇವೇಗೌಡರ ಆರೋಗ್ಯದ ದೃಷ್ಟಿಯಿಂದ ಅವರ ಪ್ರವಾಸವನ್ನು ಹಳೆ ಮೈಸೂರು ಭಾಗಕ್ಕೆ ಮಾತ್ರ ಸೀಮಿತ ಮಾಡಲಾಗಿದೆ. ಹಾಗಾಗಿ ಅವರು ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ.ಉತ್ತರ ಕರ್ನಾಟಕದ ಬೀದರ್, ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು ಸೇರಿದಂತೆ ಇನ್ನುಳಿದ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರವಾಸ ಮಾಡಲಿದ್ದಾರೆ.ಇನ್ನು ಬಿಜೆಪಿ ಅಪೇಕ್ಷಿಸುವ ಕಡೆಯಲ್ಲಿ ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಜೊತೆಯಲ್ಲಿ ಪ್ರವಾಸ ಮಾಡಲು ಕಾರ್ಯ ಯೋಜನೆ ಸಿದ್ಧಪಡಿಸಲಾಗಿದೆ.ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ಹೊಂದಾಣಿಕೆಯಿಂದ ಮತದಾರರ ಮನ ಸೆಳೆಯಲು ಕಾರ್ಯತಂತ್ರವನ್ನು ರೂಪಿಸಿಕೊಳ್ಳುತ್ತಿವೆ. ಸಾರ್ವಜನಿಕ ವೇದಿಕೆಯಲ್ಲಿ ಎರಡೂ ಪಕ್ಷಗಳು ಒಟ್ಟಿಗೆ ಮತಯಾಚನೆ ಮಾಡುವ ಮೂಲಕ ಕೊನೆ ತನಕ ಒಗ್ಗಟ್ಟು ಕಾಪಾಡಿಕೊಳ್ಳಲು ನಿರ್ಧರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 4 =
Remember me
