
ಬೆಂಗಳೂರು:ಲೋಕಸಭೆ ಎರಡನೇ ಹಂತದ ಚುನಾವಣೆಯಲ್ಲಿಯೂ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ತೆರಳಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮುಂದಾಗಿದ್ದಾರೆ.ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿರುವ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿಯೇ ಚುನಾವಣೆ ಮುಗಿಯುವುದರಿಂದ ಗೌಡರು ವಿಶ್ರಾಂತಿಗೆ ತೆರಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.ಮೈತ್ರಿ ಧರ್ಮವನ್ನು ಪಾಲನೆ ಮಾಡಲು ನಮ್ಮ ಕರ್ತವ್ಯವನ್ನು ನಾವು ಮಾಡಬೇಕು ಎಂದು ಹೇಳಿರುವ ಗೌಡರು, ತಮ್ಮ ಪ್ರಭಾವ ಇರುವ ಜಿಲ್ಲೆಗಳಿಗೆ ಹೋಗಿ ಬರಲು ನಿರ್ಧರಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ಖಚಿತಪಡಿಸಿವೆ.ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗೆ ನೀಡಿದ ನೆರವು, ಹಾಗೆಯೇ ರಾಯಚೂರು ಜಿಲ್ಲೆಯ ದೇವದುರ್ಗ ಮತ್ತಿತರ ಭಾಗದಲ್ಲಿ ಮಾಡಿರುವ ನೀರಾವರಿ ಯೋಜನೆ ಕಾರಣದಿಂದ ಅವರ ಪ್ರಭಾವ ಇದೆ. ವಿಜಯಪುರ, ಕಲಬುರ್ಗಿ, ಯಲಬುರ್ಗ ಮತ್ತು ರಾಯಚೂರು ಜಿಲ್ಲೆಯಲ್ಲಿ ಜೆಡಿಎಸ್ ನೆಲೆ ಇರುವ ಕಾರಣ ಆ ಭಾಗದಲ್ಲಿ ಪ್ರವಾಸ ಮಾಡಿ ಬರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗೆ ಅವರು ಆಹ್ವಾನಿಸಿದ ಕಡೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಜೆಡಿಎಸ್ ಪಕ್ಷದಿಂದ ಶಾಸಕರಿರುವ ಮತ್ತು ಮಾಜಿ ಶಾಸಕರು ಇರುವ ಕಡೆಯಲ್ಲಿಯೂ ಪ್ರವಾಸ ಮಾಡಲು ಯೋಜಿಸಿದ್ದಾರೆ.ಮಾಜಿ ಸಿಎಂ ಯಡಿಯೂರಪ್ಪ ಮತ್ತು ದೇವೇಗೌಡರ ಜೊತೆಯಲ್ಲಿ ಒಂದೆರಡು ಸಭೆಗಳು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಜೊತೆಗೆ ಉತ್ತರ ಕರ್ನಾಟಕದ ಜೆಡಿಎಸ್ ನೆಲೆ ಇರುವ ಜಿಲ್ಲೆಗಳಲ್ಲಿ ಬಿಜೆಪಿ ಸಭೆ ನಡೆಸಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 16 =
Remember me
