ಬೆಂಗಳೂರು:ಮತದಾರರಿಗೆ ಗ್‌ಟಿ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟಿರುವುದಾಗಿ ಮುಖ್ಯಮಂತ್ರಿಗಳ ಮಗ ಹೇಳಿರುವುದನ್ನು ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಈ ಅಕ್ರಮ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ’ಅಸಲಿ ಹಸ್ತ’ದ ಹಕೀಕತ್ತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಪ್ರಶ್ನಿಸಿದ್ದಾರೆ.
ಈ ಪ್ರಕರಣದ ಕುರಿತು ಖಡಕ್ ತನಿಖೆ ನಡೆಸಿ ಕಾಂಗ್ರೆಸ್‌ನ ಎಲ್ಲ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹೊರ ಹಾಕಲೇಬೇಕು. ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಮನಗರ, ಮಾಗಡಿ ಸೇರಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗ್ಯಾರಂಟಿ ಕೂಪನ್, ಗ್ಯಾರಂಟಿ ಕೂಪನ್ ಹಂಚಿಯೇ ಗೆದ್ದಿದ್ದಾರೆ. ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಸಹಿ ಹಾಕಿದ ಅಧಿಕೃತ ಅಮಿಷಗಳ 5 ಗ್ಯಾರಂಟಿ ಕೂಪನ್‌ಗಳನ್ನು ಮನೆಮನೆಗೂ ಹಂಚಿ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ಇದು ಅತಿದೊಡ್ಡ ಚುನಾವಣಾ ಅಕ್ರಮ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಹೆಗ್ಗಳಿಕೆಯ ಕಗ್ಗೊಲೆ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
