
ಬೆಂಗಳೂರು:ರಾಜ್ಯಕ್ಕೆ ಏ.20ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದು, ಎರಡು ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ಚಿಕ್ಕಬಳ್ಳಾಪುರದಲ್ಲಿ ಸಭೆ, ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗಿದ್ದು, 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.ಬೆಂಗಳೂರು ಸಭೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದವರು ಭಾಗವಹಿಸಲಿದ್ದಾರೆ ಎಂದರು.ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏ.23 ಮತ್ತು 24ರಂದು ಪ್ರವಾಸ ಮಾಡಲಿದ್ದು, ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. 23ರಂದು ಬೆಳಿಗ್ಗೆ ಯಶವಂತಪುರದಲ್ಲಿ ರೋಡ್ ಶೋ, ಬಳಿಕ ಯಲಹಂಕದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಇರಲಿದೆ. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ ಎಂದರು.24ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ ಹುಬ್ಬಳ್ಳಿ ರೋಡ್ ಶೋದಲ್ಲಿ ಪಾಲ್ಗೊಳ್ಳುವರು. 24ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದು, ಬೆಳಿಗ್ಗೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ, ಮಧ್ಯಾಹ್ನ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ, ಸಂಜೆ ಉಡುಪಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.21ರಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, 24ಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದರು. ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ರಾಜ್ಯ ವಕ್ತಾರ ಡಾ.ನರೇಂದ್ರ ರಂಗಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಿಎಂ ಸ್ಪಷ್ಟನೆ ಕೊಡಲು ಆಗ್ರಹಉತ್ತರ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಕೆಲವು ಭಾಗ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಹೇಳಿರುವುದು ಆಶ್ಚರ್ಯ ತಂದಿದೆ. ಕಾಂಗ್ರೆಸ್ ಇದೇ ಅಜೆಂಡಾದ ಮೇಲೆ ಕೆಲಸ ಮಾಡುತ್ತಿದೆಯಾ? ಎಂದು ವಾಗ್ದಾಳಿ ನಡೆಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು ಎಂದು ಸುನೀಲ್ ಕುಮಾರ್ ಆಗ್ರಹಿಸಿದರು.ರೌಡಿಸಂ ಹೆಚ್ಚಾಗಿದೆಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹತಾಶೆಯಿಂದ ಕಾಂಗ್ರೆಸ್‌ನವರು ದಾಳಿ ನಡೆಸುತ್ತಿದ್ದಾರೆ. ಬೆದರಿಕೆ ಹಾಕುತ್ತಿದ್ದಾರೆ. ರೌಡಿಸಂ ಮಾಡುವುದೇ ಕಾಂಗ್ರೆಸ್ ಸಂಸ್ಕೃತಿಯಾ? ಎಂದು ಕೇಳಿದರು. ನಕ್ಸಲ್ ಚಟುವಟಿಕೆಗೆ ಪ್ರಭಾವ ಬೀರುವಂತ ಸ್ಥಿತಿ ಬೆಂಗಳೂರು ಗ್ರಾಮಾಂತರದಲ್ಲಿ ನಿರ್ಮಾಣವಾಗುತ್ತಿದೆ. ಜನ ನಿರ್ಬಯವಾಗಿ ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು. ಚುನಾವಣಾ ಆಯೋಗ ಇತ್ತ ಗಂಭೀರವಾಗಿ ಗಮನ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 5 =
Remember me
