
ಬೆಂಗಳೂರು:ಬೆಂಗಳೂರಿನಲ್ಲಿ ಏ.20ರಂದು ಆಯೋಜಿಸಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಅರಮನೆ ಮೈದಾನದ ಗಾಯತ್ರಿ ವಿಹಾರ ಗೇಟ್ ನಂ.1ರಲ್ಲಿ ನಡೆಯುವ ಪ್ರಧಾನಮಂತ್ರಿಗಳ ಬೆಂಗಳೂರು ಸಮಾವೇಶದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು,ಬೆಂಗಳೂರು ದಕ್ಷಿಣ, ಬೆಂಗಳೂರು ಮಧ್ಯ, ಬೆಂಗಳೂರು ಉತ್ತರ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರದ ಭಾಗದ ಜನರು, ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.ಮೋದಿ ಅವರನ್ನು ನೋಡಲು ಜನರು, ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಪದೇಪದೇ ಬೆಂಗಳೂರಿಗೆ ಬರಬೇಕೆಂಬ ಉತ್ಸಾಹ ಪ್ರಧಾನಿಯವರಲ್ಲೂ ಇದೆ ಎಂದರು.ಬಿಜೆಪಿಯ ಪ್ರತಿ ಬೂತ್ ಸಮಿತಿಯಲ್ಲಿ 10-15 ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ಈ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಲಾಗಿದೆ. ವಾರ್ಡ, ಮಂಡಲ, ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಬೇಕು. 32 ವಿಧಾನಸಭಾ ಕ್ಷೇತ್ರಗಳಿಂದ ದೊಡ್ಡ ಸಂಖ್ಯೆಯ ಕಾರ್ಯಕರ್ತರ ತಂಡ ಬರಬೇಕೆಂದು ವಿನಂತಿಸಿದರು. 20ರಂದು ಮೋದಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು ಎಂದ ಅವರು, 4 ಕ್ಷೇತ್ರಗಳಿಂದ ಸುಮಾರು 2 ಲಕ್ಷ ಸೇರುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪೋಟೋ: ಶೋಭಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
