ಬೆಂಗಳೂರು:ರಾಜ್ಯ ವಿಧಾನ ಪರಿಷತ್ತಿಗೆ ಜೂ.3 ರಂದು ನಡೆಯುವ ಆರು ಕ್ಷೇತ್ರಗಳ ಚುನಾವಣೆಗೆ ಅಂತಿಮವಾಗಿ 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 77 ಪುರುಷ ಅಭ್ಯರ್ಥಿಗಳು, ಒಬ್ಬ ಮಹಿಳಾ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 19, ಬೆಂಗಳೂರು ಪದವೀಧರರ ಕ್ಷೇತ್ರ 15, ಆಗ್ನೇಯ ಶಿಕ್ಷಕರ ಕ್ಷೇತ್ರ 15, ನೈರುತ್ಯ ಶಿಕ್ಷಕರ ಕ್ಷೇತ್ರ 8, ನೈರುತ್ಯ ಪದವೀಧರರ ಕ್ಷೇತ್ರ 10, ದಕ್ಷಿಣ ಶಿಕ್ಷಕರ ಕ್ಷೇತ್ರ 11 ಮಂದಿ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಒಬ್ಬ ಮಹಿಳಾ ಅಭ್ಯರ್ಥಿಯೂ ಸ್ಪರ್ಧೆಯಲ್ಲಿದ್ದಾರೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಮುಖಂಡ ಸುರೇಶ ಸಜ್ಜನ ಪಕ್ಷದ ಹಿರಿಯರ ಸಲಹೆಯಂತೆ ನಾಮಪತ್ರ ವಾಪಸ್ ಪಡೆದಿರುವುದಾಗಿ ಹೇಳಿದ್ದಾರೆ.
ಈ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 4 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಕಾಂಗ್ರೆಸ್ ಎಲ್ಲ ಆರೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಿದ್ದು, ಮೈತ್ರಿ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಾಣಿ ಇದೆ.ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಮಂಗಳವಾರದಿಂದ ಚುನಾವಣಾ ಕಣ ರಂಗೇರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 4 =
Remember me
