ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಸಂಘಕ್ಕೆ ಚುನಾವಣೆ ನಡೆಸಲು ನಿರ್ದೇಶಿಸುವಂತೆ ಕೋರಿ ಚಿತ್ರ ನಿರ್ಮಾಪಕ ಕೃಷ್ಣೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ, ಈ ಆದೇಶ ಮಾಡಿದೆ.
ಅರ್ಜಿದಾರರ ಪರ ವಕೀಲ ಧರ್ಮಪಾಲ ಗೌಡ ವಾದ ಮಂಡಿಸಿ, ಸಂಘದ ಪದಾಧಿಕಾರಿಗಳ ನಡುವೆ ಉಂಟಾದ ಭಿನ್ನಾಭಿಪ್ರಾಯಗಳಿಂದ ಹಿಂದಿನ ಕಾರ್ಯಕಾರಿ ಸಮಿತಿಯನ್ನು ಪದಚ್ಯುತಿಗೊಳಿಸಲಾಗಿತ್ತು. ಬಳಿಕ ಸಂಘದ ಕೆಲಸ-ಕಾರ್ಯಗಳ ನಿರ್ವಹಣೆಗೆ ನಿವೃತ್ತ ಐಪಿಎಸ್ ಅಧಿಕಾರಿ ಶಂಕರಲಿಂಗೇಗೌಡ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಕಾನೂನು ಪ್ರಕಾರ ಆಡಳಿತಾಧಿಕಾರಿ ನೇಮಕಗೊಂಡ 6 ತಿಂಗಳ ನಂತರ ಅವರ ಅವಧಿ ಹಾಗೂ ಅಧಿಕಾರ ಪೂರ್ಣಗೊಳ್ಳುತ್ತದೆ. ಅಷ್ಟರೊಳಗೆ ಚುನಾವಣೆ ನಡೆಸಬೇಕಾಗುತ್ತದೆ. ಆದರೆ, ಕಳೆದ ಎರಡೂವರೆ ವರ್ಷಗಳಿಂದಲೂ ಆಡಳಿತಾಧಿಕಾರಿಯ ಅವಧಿ ವಿಸ್ತರಿಸಿಕೊಂಡು ಬರಲಾಗುತ್ತಿದೆಯೇ ಹೊರತು, ಸಂಘಕ್ಕೆ ಚುನಾವಣೆ ನಡೆಸುತ್ತಿಲ್ಲ. ಆದ್ದರಿಂದ, ಕೂಡಲೇ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.
ಈ ವಾದವನ್ನು ಪರಿಗಣಿಸಿದ ಪೀಠ, ನಿಯಮಗಳ ಪ್ರಕಾರ 6 ತಿಂಗಳಿಗಿಂತ ಹೆಚ್ಚಿನ ಅವಧಿಗೆ ಆಡಳಿತಾಧಿಕಾರಿಯನ್ನು ಮುಂದುವರಿಸುವಂತಿಲ್ಲ. ಆದರೆ, ಈ ಪ್ರಕರಣದಲ್ಲಿ ಎರಡೂವರೆ ವರ್ಷಗಳಿಂದಲೂ ಆಡಳಿತಾಧಿಕಾರಿಯ ಅವಧಿ ಹಾಗೂ ಅಧಿಕಾರವನ್ನು ವಿಸ್ತರಿಸಿಕೊಂಡು ಬರಲಾಗುತ್ತಿದೆ. ಆದ್ದರಿಂದ, ಸಂಘಕ್ಕೆ ಕೂಡಲೇ ಚುನಾವಣೆ ನಡೆಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಪೀಠ, ಮುಂದಿನ 3 ತಿಂಗಳ ಒಳಗೆ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ನಟ ದರ್ಶನ್​ ಈಗ ಕರ್ನಾಟಕ ಕೃಷಿ ಇಲಾಖೆ ರಾಯಭಾರಿ; ಯಾವುದೇ ಸಂಭಾವನೆ ಪಡೆಯದೇ ಅಂಬಾಸಡರ್..

ಸಾಹುಕಾರ ತಪ್ಪು ಮಾಡಿಲ್ಲ… ಅವ್ರಿಗೆ ಅದೆಲ್ಲಾ ಗೊತ್ತೇ ಇಲ್ಲ… ನಾನು ಸಾಯ್ಬೇಕು… ಬೆಂಕಿಗೆ ಬಿದ್ದ ಅಭಿಮಾನಿ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:seven + seven =
Remember me
