
ಬೆಂಗಳೂರು:ಮಂಡ್ಯ ಸಂಸದೆ ಸುಮಲತಾ ಅವರು, ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಂಬಲ ೋಷಣೆ ಮಾಡಿರುವುದರಿಂದ ಜೆಡಿಎಸ್ ನಿರಾಳವಾಗಿದೆ.ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ಕುಮಾರಸ್ವಾಮಿ, ಕಳೆದ ಚುನಾವಣೆಯಲ್ಲಿ ಸುಮಲತಾ ವಿರುದ್ದವೇ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಿ ಸುಮಲತಾ ವಿರುದ್ದವೇ ಭರ್ಜರಿ ಪ್ರಚಾರ ನಡೆಸಿದ್ದರು.ಬದಲಾದ ರಾಜಕೀಯ ಚಿತ್ರಣದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸುಮಲತಾ ಅವರಿಗೂ ಈ ನಡೆ ಅನಿವಾರ್ಯವಾಗಿತ್ತು.ಸುಮಲತಾ ನಿರ್ಧಾರ ಪ್ರಕಟ ಮಾಡಿದ ಬಳಿಕ ಸ್ವಲ್ಪ ನಿರಾಳವಾಗಿರುವ ದಳಪತಿಗಳು, ರಾಜ್ಯದ ಹಲವು ಕ್ಷೇತ್ರಗಳಲ್ಲಿ ಅಂಬರೀಶ್ ಅಭಿಮಾನಿಗಳ ಬೆಂಬಲ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದೆ.ಬಿಜೆಪಿ ಸೇರುವುದಾಗಿಯೂ ಸುಮಲತಾ ಪ್ರಕಟಿಸಿರುವುದರಿಂದ ಇನ್ನು ಮುಂದೆ ಬಿಜೆಪಿ ಹೈಕಮಾಂಡ್ ಮೂಲಕ ತಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು ಎನ್ನುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಜೆಡಿಎಸ್, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಂಟಿಯಾಗಿ ಪ್ರಚಾರ ನಡೆಸಲು ಉದ್ದೇಶಿಸಿದೆ.ಮತ್ತೊಂದೆಡೆ ಬಿಜೆಪಿ ಮುಖಂಡರುಗಳು ಕೂಡ, ಸಮುಲತಾ ಅವರನ್ನು ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಬಳಸಿಕೊಳ್ಳಲು ಕಾರ್ಯಯೋಜನೆ ಸಿದ್ಧಪಡಿಸಿಕೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
