
ಬೆಂಗಳೂರು:ಬೂತ್‌ನಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಗ್ರಾಮ ಚಲೋ ಕಾರ್ಯಕ್ರಮ ಆರಂಭ ಮಾಡಲಾಗುತ್ತಿದ್ದು, ಅದಕ್ಕಾಗಿ 40 ಸಾವಿರ ಕಾರ್ಯಕರ್ತರನ್ನು ಈ ಕಾರ್ಯಕ್ರಮಕ್ಕೆ ನಿಯೋಜನೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ಕುಮಾರ್ ತಿಳಿಸಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಚಲೋದಲ್ಲಿ ಕಾರ್ಯಕರ್ತರೆಲ್ಲರೂ ಭಾಗಿಯಾಗಲಿದ್ದು, ಲೋಕಸಭೆ ಚುನಾವಣೆಗೆ ಇದು ಅನುಕೂಲ ಆಗಲಿದೆ ಎಂದರು.2019 ರಲ್ಲಿ ಬೂತ್‌ನಲ್ಲಿ ಎಷ್ಟು ಮತ ಬಂದಿತ್ತೋ, ಅದಕ್ಕಿಂತ ಶೇ. 10 ಮತ ಹೆಚ್ಚಾಗಬೇಕು ಎಂದು ಗುರಿ ನಿಗದಿಪಡಿಸಿದ್ದೇವೆ. ಅಭಿಯಾನಕ್ಕೆ ಹೋಗುವ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತದೆ. ಫೆಬ್ರವರಿ ಮೊದಲ ವಾರದಲ್ಲಿ ಅಭಿಯಾನ ಶುರುವಾಗಲಿದೆ ಎಂದರು.ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಕೇಂದ್ರದ ಜನಪರ ಕಾರ್ಯಕ್ರಮ ತಿಳಿಸುತ್ತೇವೆ. ರಾಜ್ಯ ಸರ್ಕಾರದ ವೈಫಢಲ್ಯಗಳ ಬಗ್ಗೆಯೂ ಅರಿವು ಮೂಡಿಸುತ್ತೇವೆ. ನಾಳೆಯಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದ ತಯಾರಿ ಮಾಡಲಾಗುತ್ತದೆ ಎಂದು ಹೇಳಿದರು.ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆದ ಬಳಿಕ ರಾಮ ರಾಜ್ಯದ ಪರಿಕಲ್ಪನೆ ಆರಂಭವಾಗಿದೆ. ಸಿದ್ದರಾಮಯ್ಯರಲ್ಲಿ ಕೂಡ ಬದಲಾವಣೆ ಆರಂಭವಾಗಿದೆ. ಶ್ರೀರಾಮನನ್ನು, ಹಿಂದೂಗಳನ್ನು ಬಿಟ್ಟು ಯಾರೂ ರಾಜಕೀಯ ಮಾಡಲು ಸಾಧ್ಯವಿಲ್ಲ. ಮಂದಿರ ಮುಖಾಂತರ ಭಾರತ ವಿಶ್ವಗುರು ಆಗಬೇಕು ಎಂದು ಹೇಳಿದರು.ಚಿತ್ರದುರ್ಗದ ಹಿಂದುಳಿದ ಸಮಾವೇಶಕ್ಕೆ ನನಗೆ ಆಹ್ವಾನ ಕೊಟ್ಟಿಲ್ಲ; ಆಹ್ವಾನ ಕೊಟ್ಟರೆ ನಾನು ಹೋಗುತ್ತೇನೆ ಎಂದು ತಿಳಿಸಿದರು.ಮಂಗಳೂರಿನ ಸಮಾವೇಶದಲ್ಲಿ ಮುಸ್ಲಿಮರ ಬೇಡಿಕೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲರೂ ಬೇಡಿಕೆಗಳನ್ನು ಮುಂದಿಡುತ್ತಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವ ರೀತಿ ಬಜೆಟ್ ಮಂಡಿಸುತ್ತದೆಯೋ ನೋಡೋಣ ಎಂದರು.ಕೆ.ಜೆ.ಹಳ್ಳಿ, ಡಿ.ಜೆ. ಹಳ್ಳಿ ಪ್ರಕರಣವನ್ನು ಇಡೀ ದೇಶ ನೋಡಿದೆ. ಉದ್ರಿಕ್ತ ಗುಂಪು ಹೇಗೆ ಪೊಲೀಸ್ ಠಾಣೆ ಮೇಲೆ ಹೇಗೆ ದಾಳಿಮಾಡಿದೆ? ಯಾವ ರೀತಿಯಲ್ಲಿ ಧ್ವಂಸ ಮಾಡಿದರು, ದಲಿತ ಶಾಸಕನ ಮನೆ ಮೇಲೆ ದಾಳಿ ಮಾಡಿದ್ದು ಜಗಜ್ಜಾಹೀರಾಗಿದೆ. ಬೆಂಕಿ ಇಟ್ಟವರು ಅಮಾಯಕರು ಎಂದು ಈ ಸರ್ಕಾರಕ್ಕೆ ಅನ್ನಿಸಿದ್ದರೆ ಅದಕ್ಕಿಂತ ದುರಂತ ಬೇರೊಂದಿಲ್ಲ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − seven =
Remember me
