ಮಂಡ್ಯ:ನಿಲ್ಲಿಸಿದ್ದ ಎಲೆಕ್ಟ್ರಿಕ್​ ಸ್ಕೂಟರ್​ ಅನ್ನು ಕೀ ಹಾಕೀ ಸ್ಟಾರ್ಟ್​ ಮಾಡಿದ್ದೇ ತಡ ದಿಢೀರ್​ ಬೆಂಕಿ ಕಾಣಿಸಿಕೊಂಡಿದ್ದು, ಅನಾಹುತ ತಪ್ಪಿಸುವಷ್ಟರಲ್ಲೇ ಸ್ಕೂಟರ್​ ಅಗ್ನಿಯ ಕೆನ್ನಾಲಿಗೆಗೆ ತುತ್ತಾದ ಘಟನೆ ಮಂಡ್ಯ ತಾಲೂಕಿನ ಮುತ್ತೆಗೆರೆ ಗ್ರಾಮದಲ್ಲಿ ಸಂಭವಿಸಿದೆ.
ಇದನ್ನೂ ಓದಿ:ಭಾರತಕ್ಕೆ ಒಟ್ಟಿಗೆ ಅಪ್ಪಳಿಸಲಿವೆ ಎರಡು ಸೈಕ್ಲೋನ್​: ಇದು ಅಪರೂಪದ ವಿದ್ಯಾಮಾನ, ಹವಾಮಾನ ತಜ್ಞರ ಎಚ್ಚರಿಕೆ
ಎಂದಿನಂತೆ ಕೀ ಆನ್​ ಮಾಡಿ ಸ್ಟಾರ್ಟ್​​ ಮಾಡುವಾಗ ಸ್ಕೂಟರ್​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಯನ್ನು ನಂದಿಸುವ ಪ್ರಯತ್ನಕ್ಕೆ ಮುಂದಾದರೂ ಕೂಡ ಇದು ಫಲಿಸಲಿಲ್ಲ. ಅಗ್ನಿಯ ಅವಘಡಕ್ಕೆ ಎಲೆಕ್ಟ್ರಿಕ್​ ಸ್ಕೂಟರ್​ ಕ್ಷಣಾರ್ಧದಲ್ಲಿ ಧಗಧಗನೆ ಉರಿದು ಹೋಗಿದೆ. ಸುಟ್ಟು ಹೋದ ಎಲೆಕ್ಟ್ರಿಕ್ ಸ್ಕೂಟರ್ ಚಂದ್ರಶೇಖರ್ ಎಂಬುವರಿಗೆ ಸೇರಿದ್ದು ಎಂದು ಹೇಳಲಾಗಿದೆ.
ಇದನ್ನೂ ಓದಿ:ಚಕ್ಕಂದ ಬೇಡವೆಂದ ತಾಯಿಯನ್ನು ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದ ಟೀನೇಜ್​ ಪುತ್ರಿ!
ಮನೆಯಿಂದ ಬಸರಾಳು ಗ್ರಾಮಕ್ಕೆ ತೆರಳಲು ಸ್ಕೂಟರ್ ಸ್ಟಾರ್ಟ್ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಒಕಿನೊವಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿಯಾಗಿದ್ದು, ಘಟನೆಯನ್ನು ಪ್ರತ್ಯಕ್ಷ ಕಂಡ ಗ್ರಾಮಸ್ಥರು ಒಮ್ಮೆ ಬೆಚ್ಚಿಬಿದ್ದಿದ್ದಾರೆ. ಈ ಪ್ರಕರಣ ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಚಕ್ಕಂದ ಬೇಡವೆಂದ ತಾಯಿಯನ್ನು ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದ ಟೀನೇಜ್​ ಪುತ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
