ಬೆಂಗಳೂರು:ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಶುಲ್ಕ ಪಾವತಿಯನ್ನು 3 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಮುಂದೂಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್ ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.
ಬೆಂಗಳೂರು ನಿವಾಸಿಗಳಾದ ಪಿ.ಸಿ. ರಾವ್ ಹಾಗೂ ಕೆ. ಗಣೇಶ್ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಅರ್ಜಿಯಲ್ಲಿನ ಅಂಶಗಳನ್ನು ಗಮನಿಸಿದ ನ್ಯಾಯಪೀಠ, ಲಾಕ್‌ಡೌನ್ ಇರುವ ಕಾರಣ, ಗ್ರಾಹಕರು ವಿದ್ಯುತ್ ಶುಲ್ಕೃ ಪಾವತಿಸಲು ಕಷ್ಟವಾಗುತ್ತಿದೆ ಎಂದು ಅರ್ಜಿದಾರರು ಹೇಳಿದ್ದಾರೆ. ಆದರೆ, ಹಲವು ವಿಧಾನಗಳ ಮೂಲಕ ಡಿಜಿಟಲ್ ಪಾವತಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಸರ್ಕಾರ ಹೇಳಿಲ್ಲ. ಆದ್ದರಿಂದ, ಅರ್ಜಿ ವಿಚಾರಣೆ ನಡೆಸುವುದು ಅಗತ್ಯ ಕಂಡುಬರುತ್ತಿಲ್ಲ. ಈ ರೀತಿಯ ಅರ್ಜಿ ದಾಖಲಿಸುವುದು ಕಾನೂನಿನ ದುರ್ಳಕೆಯಾಗಿದೆ ಎಂದ ಪೀಠ, ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿ, ಪಿಐಎಲ್ ವಜಾಗೊಳಿಸಿತು.
ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಾವತಿಸಿ, ಆ ಕುರಿತ ದಾಖಲೆಯನ್ನು 2 ವಾರದೊಳಗೆ ರಿಜಿಸ್ಟ್ರಾರ್ ಅವರಿಗೆ ಇಮೇಲ್ ಮೂಲಕ ಕಳಿಸಿಕೊಡಬೇಕೆಂದು ಅರ್ಜಿದಾರರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ವೈದ್ಯರ ನೆರವಿಗೆ ಧಾವಿಸಿರುವ ಡಿಆರ್‌ಡಿಒ: ಸೋಂಕು ತಗುಲದಂತೆ ಉಪಕರಣ ಶೋಧನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
