ಕುಂದಾಪುರ:ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕುಂದಾಪುರ ಮೇಲ್ಸೇತುವೆ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿತ್ತು. ಆದರೆ ಅಲ್ಲಿ ಇದೀಗ ಕೈ ಇಟ್ಟಲ್ಲೆಲ್ಲ ಕರೆಂಟ್ ಎಂಬಂತಾಗಿದ್ದು, ಕೂಡಲೇ ವಿದ್ಯುತ್​ ಸಂಪರ್ಕ ಕಡಿತಗೊಳಿಸಿ ಅವಘಡ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಹಾದು ಹೋಗಿರುವ ಫ್ಲೈಓವರ್​ನಲ್ಲಿ ಅಸಮರ್ಪಕ ಕಾಮಗಾರಿಯಿಂದಾಗಿ ವಿದ್ಯುತ್ ಪ್ರವಹಿಸಲಾರಂಭಿಸಿದೆ. ಫ್ಲೈವರ್​ ಅಂಚಿನ ಗೋಡೆ ಮೇಲೆ ಟೆಸ್ಟರ್​ ಇಟ್ಟು ಪರೀಕ್ಷಿಸಿದರೆ ವಿದ್ಯುತ್ ಪ್ರವಾಹ ಇರುವುದು ದೃಢಪಟ್ಟಿದೆ.
ದಾರಿದೀಪಕ್ಕೆ ನೀಡಲಾಗಿರುವ ವಿದ್ಯುತ್ ಸಂಪರ್ಕ ಸೋರಿಕೆ ಆಗುತ್ತಿರುವುದರಿಂದ ಮಳೆ ನೀರಿನ ಕಾರಣಕ್ಕೆ ಫ್ಲೈ ಓವರ್​​ನಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಸಾರ್ವಜನಿಕರು ಈ ಬಗ್ಗೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದು, ಅವರು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ಇದನ್ನೂ ಓದಿ:ವಿದೇಶದಲ್ಲಿ ಸದ್ ಮಾಡ್ತಿದಾರೆ ಸಿದ್: ಆಸ್ಟ್ರೇಲಿಯನ್​ ಸಿನಿಮಾಗೆ ಕನ್ನಡಿಗನ ಸಂಗೀತ ನಿರ್ದೇಶನ
ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಭಾರಿ ಅವಘಡ ತಪ್ಪಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸುವುದಾಗಿ ನವಯುಗ ಕಂಪನಿಯ ಉಪ ವಿಭಾಗಾಧಿಕಾರಿ ಕೆ. ರಾಜು. ತಿಳಿಸಿದ್ದಾರೆ.
ಮಗನ ಶಿಕ್ಷಣದ ಖರ್ಚಿಗಾಗಿ ಎಲಾನ್​ ಮಸ್ಕ್ ಜತೆಗಿನ ಫೋಟೋ ಹರಾಜಿಗಿಟ್ಲು ಹಳೇ ಲವರ್​!
‘ಗರ್ಲ್​ ನಂ. 166’ ಗ್ರೇಟ್ ಎಸ್ಕೇಪ್​: 7ನೇ ವಯಸ್ಸಲ್ಲಿ ನಾಪತ್ತೆ, ಹದಿನಾರನೇ ವಯಸ್ಸಲ್ಲಿ ಮನೆಗೆ ಬಂದ್ಲು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + two =
Remember me
