
ಬೆಂಗಳೂರು:ಆನೆಗಳ ದಾಳಿ ತಪ್ಪಿಸಲು ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಬನ್ನೇರುಘಟ್ಟ ಮತ್ತು ರಾಮನಗರದಲ್ಲಿ ಹೆಚ್ಚುವರಿಯಾಗಿ ಎರಡು ಆನೆ ಕಾರ್ಯಪಡೆ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ರಾಮನಗರ, ಬನ್ನೇರುಘಟ್ಟ, ಬಂಡೀಪುರ ಸೇರಿ 8 ಜಿಲ್ಲೆಗಳಲ್ಲಿ ಕಾರ್ಯಪಡೆಗಳಿದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
ಆನೆಕಾರಿಡಾರ್ ಯೋಜನೆಆನೆಗಳ ಕಾರಿಡಾರ್ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಸಕಲೇಶಪುರ ಮತ್ತಿತರ ಭಾಗದಲ್ಲಿ ಕಾರಿಡಾರ್‌ಗೆ ತಮ್ಮದೇ ಜಮೀನು ಬಿಟ್ಟುಕೊಡಲು ರೈತರು ಮುಂದೆ ಬಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಅನುದಾನ ಅಗತ್ಯವಿದ್ದು, ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
36 ವನ್ಯಜೀವಿ ಅಭಯಾರಣ್ಯರಾಜ್ಯದಲ್ಲಿ ಒಟ್ಟು 43,382.76 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶ ಇದ್ದು, ಈ ಪೈಕಿ 11,318.358 ಚದರ ಕಿಲೋ ಮೀಟರ್ ಸಂರಕ್ಷಿತ ಅರಣ್ಯ ಪ್ರದೇಶವಿದೆ. ರಾಜ್ಯದಲ್ಲಿ 5 ರಾಷ್ಟ್ರೀಯ ಉದ್ಯಾನಗಳು, 36 ವನ್ಯಜೀವಿ ಅಭಯಾರಣ್ಯಗಳು, 19 ಸಂರಕ್ಷಿತ ಮೀಸಲು ಹಾಗೂ 1 ಸಮುದಾಯ ಮೀಸಲು ಅರಣ್ಯವಿದೆ. 5 ಹುಲಿ ಸಂರಕ್ಷಿತ ತಾಣಗಳಿವೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + eleven =
Remember me
