
ಬೆಂಗಳೂರು:ವಿಶ್ವ ಆನೆ ದಿನಾಚರಣೆ ಸಲುವಾಗಿ ಈ ಬಾರಿ ಮಾನವ-ಆನೆ ಸಂಘರ್ಷ ಕುರಿತಾಗಿ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆ.12ರಂದು ಬೆಂಗಳೂರು ಕೃಷಿ ವಿವಿಯ ಜಿಕೆವಿಕೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಮೆರಿಕಾ, ಜರ್ಮನಿ, ಜಪಾನ್, ಇಂಗ್ಲೇಂಡ್ ಸೇರಿದಂತೆ 11 ರಾಷ್ಟ್ರಗಳ ಸುಮಾರು 17ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ ದೇಶದ 26 ರಾಜ್ಯಗಳ 660 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.ರಾಜ್ಯದಲ್ಲಿ 6395 ಆನೆಗಳಿದ್ದು ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. 563 ಹುಲಿಗಳಿದ್ದು, ದೇಶದಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ. ಇದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶವಿಲ್ಲದ ಕಾರಣ ಆನೆಗಳು ನಾಡಿಗೆ ಬರುತ್ತಿದ್ದು, ಬೆಳೆ ಮತ್ತು ಜೀವಹಾನಿ ಸಂಭವಿಸುತ್ತಿದೆ. ಈ ನಿಟ್ಟಿನಲ್ಲಿ ಆನೆ ಮತ್ತು ಮಾನವ ಸಂಘರ್ಷ ತಗ್ಗಿಸಲು ಈ ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದರು.ಒಡಿಶಾದಲ್ಲಿ ಆನೆಯಿಂದಾಗಿ 2023-24ರಲ್ಲಿ 149 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಸುರಕ್ಷತಾ ಕ್ರಮ ಕೈಗೊಂಡಿರುವುದರಿಂದ ಸಾವಿನ ಸಂಖ್ಯೆ ಕಡಿಮೆ ಇದ್ದು, ಪ್ರತಿ ವರ್ಷ ಸರಾಸರಿ 30 ಜನರು ಆನೆಗಳ ದಾಳಿಯಿಂದ ಸಾವಿಗೀಡಾಗುತ್ತಿದ್ದಾರೆ ಎಂದರು.ದೇಶದಲ್ಲಿ 2009ರಿಂದ 2023ರ ನಡುವೆ ಒಟ್ಟಾರೆ ಸುಮಾರು 1381 ಆನೆಗಳು ಅಸಹಜ ಸಾವು ಕಂಡಿವೆ. ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಸುಮಾರು 283 ಆನೆಗಳು ಮೃತಪಟ್ಟಿವೆ. ಈ ಪೈಕಿ ವಿದ್ಯುತ್ ಸ್ಪರ್ಶದಿಂದ 30ಕ್ಕೂ ಹೆಚ್ಚು ಆನೆಗಳು ಸಾವಿಗೀಡಾಗಿವೆ ಎಂದರು.ಆನೆಗಳಿಂದ ಜೀವಹಾನಿ ಮತ್ತು ಬೆಳೆ ಹಾನಿ ತಪ್ಪಿಸಲು ಆನೆ ಕಂದಕ ನಿರ್ಮಾಣ, ಟೆಂಟಕಲ್ ಫೆನ್ಸಿಂಗ್ ಅಂದರೆ ತೂಗಾಡುವ ಸೌರ ವಿದ್ಯುತ್ ತಂತಿಗಳು, ಸೌರ ಬೇಲಿ ಅಳವಡಿಕೆಯಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈವರೆಗೆ 332.62 ಕಿ.ಮೀ. ರೈಲ್ವೆ ಬ್ಯಾರಿಕೇಡ್, 3426 ಕಿ.ಮೀ ಸೌರ ಬೇಲಿ ಅಳವಡಿಸಲಾಗಿದೆ. 2,420 ಕಿ.ಮೀ. ಆನೆ ನಿಗ್ರಹ ಕಂದಕ -ಇಟಿಪಿ (ಎಲಿಫೆಂಟ್ ಫ್ರ್ೂ ಟ್ರಂಚಸ್) ನಿರ್ಮಾಣ ಮಾಡಲಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
