
ಬೆಂಗಳೂರು:ಆನೆ ಮತ್ತು ಮಾನವ ಸಂಘರ್ಷದಿಂದ ರಾಜ್ಯದಲ್ಲಿ ಪ್ರತಿವರ್ಷ 50 ಸಾವು ಸಂಭವಿಸುತ್ತಿದ್ದು, ಅಮೂಲ್ಯ ಜೀವ, ಬೆಳೆ ಉಳಿಸಲು 324 ಕಿ.ಮೀ. ಉದ್ದ ರೈಲ್ವೆ ಬ್ಯಾರಿಕೇಡ್ ಹಾಕಬೇಕಿದೆ. ಅದಕ್ಕಾಗಿ 500 ಕೋಟಿ ಅನುದಾನ ನೀಡುವಂತೆ ಅರಣ್ಯ ಸಚಿವ ಈಶ್ವರಖಂಡ್ರೆ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ಸಿಎಂ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಈವರೆಗೆ ಸುಮಾರು 333 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದ್ದು, 101 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಪರಿಹಾರ ಮೊತ್ತ ಹೆಚ್ಚಳಸಿಬ್ಬಂದಿಗಳ ಜೀವ ಹಾನಿಗೆ 30 ಲಕ್ಷ ರೂ ಇದ್ದ ಪರಿಹಾರ ಮೊತ್ತವನ್ನು ಸಿಎಂ ಸಿದ್ದರಾಮಯ್ಯ ಅವರು 50 ಲಕ್ಷಕ್ಕೆ ಹೆಚ್ಚಳ ಮಾಡಿದರು. 49 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ ಹಾಗೂ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ವಿತರಣೆ ಮಾಡುತ್ತಿರುವುದು ಸಂತಸದ ಸಂಗತಿ ಎಂದರು.
310 ಅರಣ್ಯ ವೀಕ್ಷಕ ಹುದ್ದೆಗೆ 1.94 ಲಕ್ಷ ಅರ್ಜಿ:310 ಅರಣ್ಯ ವೀಕ್ಷಕರ ಹುದ್ದೆಗೆ ಆನ್ ಲೈನ್ ಮೂಲಕ 1,94,007 ಅಭ್ಯರ್ಥಿಗಳು ಅರ್ಜಿ ಬಂದಿದ್ದವು. ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತದಲ್ಲಿ ಸ್ಥಳೀಯ ಮೂಲ ಆದವಾಸಿ ಜನಾಂಗದ ಅಭ್ಯರ್ಥಿಗಳಿಗೆ ಮೀಸಲಾತಿ ಇದ್ದು, ಈ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸದ ಕಾರಣ ಮತ್ತು ಇನ್ನಿತರ ತಾಂತ್ರಿಕ ಕಾರಣಗಳಿಂದ 43 ಹುದ್ದೆಗಳಿಗೆ ಇಂದು ನೇಮಕಾತಿ ನೀಡಲಾಗುತ್ತಿಲ್ಲ ಎಂದರು.
540 ಗಸ್ತು ಪಾಲಕರ ನೇಮಕ ಶೀಘ್ರ540 ಗಸ್ತು ಅರಣ್ಯ ಪಾಲಕರ ನೇಮಕಾತಿ ಪ್ರಕ್ರಿಯೆಯೂ ಪ್ರಗತಿಯಲ್ಲಿದ್ದು, ಅಕ್ಟೋಬರ್‌ನಲ್ಲಿ ಪರೀಕ್ಷೆ ನಡೆಸಿ ನವೆಂಬರ್ ಹೊತ್ತಿಗೆ ಗಸ್ತು ಅರಣ್ಯ ಪಾಲಕರ ಹುದ್ದೆಗೆ ನೇಮಕಗೊಂಡವರಿಗೂ ನೇಮಕಾತಿ ಪತ್ರ ನೀಡಲಾಗುವುದು. ಇದಲ್ಲದೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕೂಡ 152 ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದರು.
10 ಕೋಟಿ ಸಸಿ ನೆಡುವ ಗುರಿ:ಜಾಗತಿಕ ತಾಪಮಾನ ತಗ್ಗಿಸಲು ಮುಂದಿನ ವರ್ಷ ಅರಣ್ಯ ಇಲಾಖೆಯಿಂದ 10 ಕೋಟಿ ಸಸಿ ನೆಟ್ಟು ಬೆಳೆಸಲು ತೀರ್ಮಾನಿಸಲಾಗಿದೆ. 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಂದ ಸುಮಾರು 44,500 ಹೆಕ್ಟೇರ್ ನೆಡುತೋಪು ನಿರ್ಮಾಣ ಮಾಡಲಾಗುತ್ತಿದೆ. ಸಾರ್ವಜನಿಕ ಮತ್ತು ರೈತರಿಗೆ ವಿತರಿಸಲು ಸುಮಾರು 2.5 ಕೋಟಿ ಸಸಿಗಳನ್ನು ಬೆಳೆಸಿ ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಗುರಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರಲ್ಲಿ ಕಡಿಮೆಯಾದಹಸಿರು ಹೊದಿಕೆ ಪ್ರಮಾಣ:ಕಳೆದ 10 ವರ್ಷಗಳಲ್ಲಿ ಬೆಂಗಳೂರು ನಗರವು 05 ಚದರ ಕಿಲೋಮೀಟರ್‌ನಷ್ಟು ಹಸಿರು ಹೊದಿಕೆಯನ್ನ ಕಳೆದುಕೊಂಡಿದೆ. ಮತ್ತೆ ಬೆಂಗಳೂರು ನಗರಕ್ಕೆ ಉದ್ಯಾನ ನಗರಿ ಎಂಬ ಖ್ಯಾತಿ ತರುವ ಪ್ರಯತ್ನ ಆಗಬೇಕು. ಇಲ್ಲಿನ ಹಸಿರು ಹೊದಿಕೆ ಹೆಚ್ಚಬೇಕು ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯೂ ಕೈಜೋಡಿಸಬೇಕಾದ ಅಗತ್ಯವಿದೆ ಎಂದರು.ಬೆಂಗಳೂರಿನಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್ ರೀತಿಯಲ್ಲಿ ದೊಡ್ಡ ಉದ್ಯಾನಗಳನ್ನು ನಿರ್ಮಿಸಬೇಕಾಗಿದೆ. ಎಚ್.ಎಂ.ಟಿ.ಯ ಬಳಿ ಇರುವ ಅರಣ್ಯ ಭೂಮಿಯನ್ನು ಮರಳಿ ಪಡೆದು ಅಲ್ಲಿ ಲಾಲ್ಬಾಗ್ ಮಾದರಿಯಲ್ಲಿ ಉದ್ಯಾನ ನಿರ್ಮಿಸುವ ಯೋಜನೆ ಇದೆ ಎಂದು ಈಶ್ವರ ಖಂಡ್ರೆ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 11 =
Remember me
