ಹಾಸನ:ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತು ತನ್ನದೇ ಆದ ಛಾಪು ಮೂಡಿಸಿ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ಅರ್ಜುನ ಇನ್ನು ಮುಂದೆ ನೆನೆಪು ಮಾತ್ರ. ಒಂಟಿ ಸಲಗದ ಜತೆ ಹೋರಾಡಿ ಮೃತಪಟ್ಟಿದ್ದ ಅರ್ಜುನನ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ನೆರವೇರಿಸಲಾಗಿದೆ.
ಅರ್ಜುನನ ಕಳೆಬರಕ್ಕೆ ಮೈಸೂರು ರಾಜಮನೆತನದ ಅರ್ಚಕರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು. ಬಳಿಕ ಜಿಲ್ಲಾಡಳಿತದಿಂದ ಅರ್ಜುನನಿಗೆ ಸರ್ಕಾರಿ ಗೌರವ ಸಮರ್ಪಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಗಿದೆ. ಮಾವುತ ವಿನು ಹಾಗೂ ಕಾವಾಡಿಗ ಪ್ರೀತಿಯ ಆನೆಗೆ ಕಣ್ಣೀರಿಡುತ್ತಲೇ ಪೂಜೆ ಮಾಡುವ ಮೂಲಕ ನಮನ ಸಲ್ಲಿಸಿದ್ದರು.
22 ವರ್ಷಗಳ ಕಾಲ ದಸರಾದಲ್ಲಿ ಭಾಗಿಯಾಗಿದ್ದ ಅರ್ಜುನ 8 ಬಾರಿ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತಿದ್ದ ಅರ್ಜುನ ಈ ರೀತಿಯ ದುರಂತ ಅಂತ್ಯ ಕಂಡಿದ್ದು ನಿಜಕ್ಕೂ ದುಃಖದ ಸಂಗತಿ. ಪೂಜೆ ಎಲ್ಲಾ ಮುಗಿದ ಮೇಲೆ ಜೆಸಿಬಿಯಿಂದ 15 ಅಡಿಗಳ ಆಳದವರೆಗೆ ಗುಂಡಿ ತೋಡಲಾಯಿತು. ಈ ವೇಳೆ ಅಲ್ಲಿದ್ದ ಜನರು ಸಮಾಧಿಗೆ ಉಪ್ಪು, ಸುಣ್ಣ, ಬ್ಲೀಚಿಂಗ್ ಪೌಡರ್ ಹಾಕಿದರು. ಬಳಿಕ ಜೆಸಿಬಿ ಸಹಾಯದಿಂದ ಮೃತದೇಹವನ್ನ ಸಮಾಧಿಗೆ ಇಳಿಸಿ ಮಣ್ಣು ಮುಚ್ಚಲಾಗಿದೆ.
ಇದನ್ನೂ ಓದಿ:ಪಂಚರಾಜ್ಯ ಚುನಾವಣೆಯಲ್ಲಿ ಸೋಲು; ಇಂಡಿಯಾ ಮೈತ್ರಿಕೂಟ ಸಭೆ ರದ್ದು
ಹಾಸನ ಜಿಲ್ಲಾಧಿಕಾರಿ ಸತ್ಯಭಾಮ, ಎಸ್ಪಿ ಮೊಹಮದ್ ಸುಜೀತಾ, ಡಿಸಿಎಫ್ ಮೋಹನ್ ಕುಮಾರ್ ಸಮ್ಕುಖದಲ್ಲಿ ಗೌರವಾರ್ಪಣೆ ಸಲ್ಲಿಸಿದರು. ಈ ವೇಳೆ ರಾಜ್ಯ ಅರಣ್ಯ ಇಲಾಖೆ ಭಾಗವಾಗಿ ಅಂತ್ಯಕ್ರಿಯೆಯಲ್ಲಿ ಸಹಾಯಕ ಅರಣ್ಯ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಶಾಶ್ವತಿ ಮಿಶ್ತ ಉಪಸ್ಥಿತರಿದ್ದರು.
ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಮೈಸೂರಿನ ಬಳ್ಳೆ ಸಾಕಾನೆ ಶಿಬಿರಕ್ಕೆ ಮೃತ ಅರ್ಜುನನನ್ನು ಕೊಂಡೊಯ್ಯಲು ಮಾವುತರು ಒತ್ತಾಯಿಸಿದ್ದಾರೆ. ಇತ್ತ ಸ್ಥಳೀಯರು ಸೂಕ್ತ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಿ ಸ್ಮಾರಕ ನಿರ್ಮಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಸ್ಥಳೀಯರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿಯಾಗಿದ್ದು, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಗುಂಪನ್ನು ಚದುರಿಸಲು ಪೊಲೀಸರು ಲಾರಿಚಾರ್ಜ್​ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
