ಬೆಂಗಳೂರು:ರಾಜ್ಯದಲ್ಲಿ ಆನೆಗಳ ದಾಳಿಯಿಂದಲೇ ಅಧಿಕ ಸಾವು ಸಂಭವಿಸುತ್ತಿದೆ. ಐದೂವರೆ ವರ್ಷದಲ್ಲಿ 148 ಜನರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 2018-19ರಲ್ಲಿ 13 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದರೆ, 2019-20ರಲ್ಲಿ 30, 2020-21ರಲ್ಲಿ 26, 2021-22ರಲ್ಲಿ 28, 2022-23ರಲ್ಲಿ 30 ಹಾಗೂ ಸೆ.3,2023 ರವರೆಗೆ 21 ಅಮೂಲ್ಯ ಜೀವ ಹಾನಿ ಆಗಿದೆ. ಇದು ಅತ್ಯಂತ ಆತಂಕದ ವಿಚಾರ. ಆನೆ ಕಾರ್ಯಾಚರಣೆ ವೇಳೆ ಶಾರ್ಪ್ ಶೂಟರ್ ವೆಂಕಟೇಶ್ ಸೇರಿದಂತೆ ಇಬ್ಬರು ಹೊರಗುತ್ತಿಗೆ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಹೇಳಿದರು.ವನ್ಯ ಮೃಗಗಳ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಜತೆಗೆ 4 ವರ್ಷಗಳ ಕಾಲ 4 ಸಾವಿರ ರೂ. ಪಿಂಚಣಿಯನ್ನೂ ನೀಡಲಾಗುತ್ತಿದೆ. ನಾವು ನೀಡುವ ಪರಿಹಾರದಿಂದ ಜೀವ ಮರಳಿ ತರಲು ಸಾಧ್ಯವಿಲ್ಲ. ಆದರೆ ಅವರ ಕುಟುಂಬಕ್ಕೆ ಆಸರೆ ಆಗುತ್ತದೆ ಎಂದರು.
ಹೊರ ಬಾರದಂತೆ ಮನವಿಆನೆಗಳು ನಾಡಿಗೆ ಬಂದಾಗ, ಅರಣ್ಯ ಇಲಾಖೆಯವರು ಸಾಮಾಜಿಕ ತಾಣಗಳು, ಮಾಧ್ಯಮಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತಾರೆ. ಆದರೂ ಕೆಲವರು ಮನೆಯಿಂದ ಹೊರಬಂದು ತಮ್ಮ ಜೀವ ಕಳೆದುಕೊಂಡಿದ್ದಾರೆ. ಆನೆಗಳ ಸಂಚಾರದ ಬಗ್ಗೆ ಮಾಹಿತಿ ಇದ್ದಾಗ, ಯಾರೂ ಕಾಡಿನ ಅಂಚಿಗೆ, ತೋಟಗಳಿಗೆ ಹೋಗಬಾರದು ಎಂದು ಮನವಿ ಮಾಡಿದರು.ನಾಗರಹೊಳೆ ವಲಯದಲ್ಲಿ ಹೆಗ್ಗಡದೇವನ ಕೋಟೆ ಬಳಿ ಸೋಮವಾರ 7 ವರ್ಷದ ಬಾಲಕ ಚರಣ್ ನಾಯಕ್ ನನ್ನು ಹುಲಿ ಕೊಂದಿರುವ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಹಿರಿಯ ಐ.ಎ್.ಎಸ್ ಅಧಿಕಾರಿ ಕುಮಾರ್ ಪುಷ್ಕರ್ ಅವರನ್ನು ಸ್ಥಳಕ್ಕೆ ಕಳಹಿಸಿದ್ದು, ಹುಲಿ ಹಿಡಿಯಲು ಕಾರ್ಯಾಚರಣೆ ಆರಂಭವಾಗಿದೆ ಎಂದು ತಿಳಿಸಿದರು.
ಶಾಶ್ವತ ಪರಿಹಾರಕ್ಕೆ ಪ್ರಯತ್ನದೇಶದಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂದರೆ 6395 ಆನೆಗಳಿವೆ. ಆದರೆ ಅರಣ್ಯ ಇಲಾಖೆ ರೈಲ್ವೆ ಬ್ಯಾರಿಕೇಡ್, ಕಂದಕ ನಿರ್ಮಾಣ ಮತ್ತು ಸೌರ ವಿದ್ಯುತ್ ಬೇಲಿ ಹಾಕುತ್ತಿರುವ ಹಿನ್ನೆಲೆಯಲ್ಲಿ ಹಾಗೂ 7 ಆನೆ ಕಾರ್ಯಾಚರಣೆ ಪಡೆಗಳು, ನಾಡಿಗೆ ಬಂದ ಆನೆಗಳನ್ನು ತಕ್ಷಣವೇ ಕಾಡಿಗೆ ಅಟ್ಟುತ್ತಿರುವ ಹಿನ್ನೆಲೆಯಲ್ಲಿ ಹಾನಿ ತಗ್ಗಿದೆ. ಪ್ರತಿಯೊಂದು ಜೀವವೂ ಅಮೂಲ್ಯ. ಮಾನವ- ವನ್ಯಜೀವಿ ಸಂಘರ್ಷದಿಂದ ಪ್ರಾಣಿಯೂ ಸಾಯಬಾರದು, ಮನುಷ್ಯರೂ ಸಾಯಬಾರದು. ಆದಾಗ್ಯೂ ಆನೆಗಳ ದಾಳಿಯಿಂದ ಸಾವು ಸಂಭವಿಸದಂತೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲೇ ಸಾವು ಕಡಿಮೆಜಾರ್ಖಂಡ್‌ನಲ್ಲಿ ಕೇವಲ 700 ಆನೆಗಳಿವೆ. ಆದರೆ ಅಲ್ಲಿ ವರ್ಷದಲ್ಲಿ ಸರಾಸರಿ 80 ಸಾವು ಸಂಭವಿಸುತ್ತದೆ. ಪಶ್ಚಿಮ ಬಂಗಾಳದಲ್ಲಿ 750 ಆನೆಗಳಷ್ಟೇ ಇವೆ. ಆದರೂ ಅಲ್ಲಿ 55 ಸಾವುಗಳು ಸಂಭವಿಸುತ್ತವೆ. ತಮಿಳುನಾಡಿನಲ್ಲಿ ವರ್ಷದಲ್ಲಿ ಸರಾಸರಿ 60, ಒಡಿಸ್ಸಾದಲ್ಲಿ 120, ಅಸ್ಸಾಂನಲ್ಲಿ ಸರಾಸರಿ 80 ಜನರು ಆನೆ ದಾಳಿಯಿಂದ ಮೃತಪಡುತ್ತಿದ್ದಾರೆ ನೆರೆಯ ಕೇರಳದಲ್ಲೂ ಈ ಸಂಖ್ಯೆ 100ಕ್ಕಿಂತ ಹೆಚ್ಚಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಕ್ಯಾಂಪಾ ನಿಧಿ ಬಂದಿಲ್ಲಕ್ಯಾಂಪಾ ನಿಧಿಯಲ್ಲಿ ನಮ್ಮದೇ 500 ಕೋಟಿ ರೂ. ಅನುದಾನ ಇದೆ. ತಾವು ದೆಹಲಿಗೆ ಹೋದಾಗ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರನ್ನು ಭೇಟಿ ಮಾಡಿ ಕ್ಯಾಂಪಾ ನಿಧಿ ಅಡಿ ಇರುವ ಹಣ ಬಿಡುಗಡೆ ಮಾಡಿದರೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಬಹುದು ಎಂದು ಮನವಿ ಮಾಡಿದೆ. ಆದರೆ 1.5 ಕೋಟಿ ವೆಚ್ಚ ಮಾಡಿ ರೈಲ್ವೆ ಬ್ಯಾರಿಕೇಡ್ ಏಕೆ ಮಾಡಬೇಕು ಎಂದು ಪ್ರಶ್ನಿಸುತ್ತಾರೆ. ಜೀವಕ್ಕಿಂತ ಹಣ ಮುಖ್ಯ ಅಲ್ಲ ಎಂದು ಈಶ್ವರ ಖಂಡ್ರೆ ಹೇಳಿದರು.
38 ಆನೆಗಳ ಸಾವುರಾಜ್ಯದಲ್ಲಿ ಈ ವರ್ಷ 38 ಆನೆಗಳು ಮೃತಪಟ್ಟಿವೆ. ಈ ಪೈಕಿ 1 ಆನೆ ರೈಲು ಡಿಕ್ಕಿಯಿಂದ ಸತ್ತಿದ್ದರೆ, ವಿದ್ಯುತ್ ಸ್ಪರ್ಶದಿಂದ 10 ಆನೆಗಳು ಮೃತಪಟ್ಟಿವೆ. 2 ಆನೆಗಳು ಗುಂಡಿನೇಟಿನಿಂದ ಸಾವಿಗೀಡಾಗಿದ್ದರೆ 25 ಆನೆಗಳು ಸ್ವಾಭಾವಿಕ ಸಾವು ಕಂಡಿವೆ ಎಂದೂ ಈಶ್ವರ್ ಖಂಡ್ರೆ ವಿವರಿಸಿದರು.
ಪರಿಸರ ಸ್ನೇಹಿ ಗಣಪನ ಪೂಜಿಸಲು ಮನವಿಪ್ರಕೃತಿ ಪರಿಸರ ಉಳಿಸಬೇಕಾದ್ದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಪರಿಸರ ಸ್ನೇಹಿಯಾದ ರಾಸಾಯನಿಕ ಬಣ್ಣ ರಹಿತ ಮಣ್ಣಿನ ಗಣಪತಿ ಪೂಜಿಸಲು ಮತ್ತು. ಜಲ ಮೂಲಗಳನ್ನು ನಾಶ ಮಾಡುವ ರಾಸಾಯನಿಕ ಬಣ್ಣ ಬಳಿದ ಮತ್ತು ಪ್ಲಾಸ್ಟರ್ ಆ್ ಪ್ಯಾರಿಸ್‌ನಿಂದ ತಯಾರಿಸಿದ ಗಣಪತಿಗಳನ್ನು ಖರೀದಿಸದಂತೆ ಈಶ್ವರ ಖಂಡ್ರೆ ಮನವಿ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
