ಬೆಂಗಳೂರು:ಕಾಡಾನೆ ಹಾವಳಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿ ಸ್ಥಳೀಯರು ರೊಚ್ಚಿಗೆದ್ದು ಮೂಡಿಗೆರೆ ಶಾಸಕರ ಮೇಲೆ ಹಲ್ಲೆ ಮಾಡಿದ ಪ್ರಕರಣದ ಬೆನ್ನಿಗೇ ಸರ್ಕಾರದಿಂದ ಮಹತ್ವದ ಆದೇಶವೊಂದು ಹೊರಬಿದ್ದಿದೆ. ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಆದೇಶವೂ ಹೊರಬಿದ್ದಿದೆ.
ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಟಾಸ್ಕ್​ಫೋರ್ಸ್​ಗಳನ್ನು ತಕ್ಷಣದಿಂದಲೇ ರಚಿಸಿ ಕಾರ್ಯಪ್ರವೃತ್ತರಾಗಬೇಕಿದ್ದು, ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಈ ಕೆಳಕಂಡಂತೆ ಕಾರ್ಯನಿರ್ವಹಿಸಬೇಕಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
1. ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುವುದು, ಜನವಸತಿ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್​​ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ ಆನೆಗಳನ್ನು ಹಿಮ್ಮೆಟ್ಟಿಸುವುದು ಮುಂತಾದ ಕಾರ್ಯಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕೈಗೊಳ್ಳಬೇಕು.
2. ಕಾಡಾನೆ ಹಾವಳಿ ಕಂಡುಬರುವ ಸ್ಥಳಗಳಲ್ಲಿ ಆನೆಗಳ ಚಲನವಲನಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಅರಣ್ಯ ಪ್ರದೇಶದೊಳಗೆ ಸಂಚರಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು.
3. ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರಸ್ಥಾನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ದೂರವಾಣಿ ಸಂಖ್ಯೆಯನ್ನು ಪ್ರಚುರಪಡಿಸುವುದು.
4. ಆನೆಗಳನ್ನು ಹಿಮ್ಮೆಟ್ಟಿಸಲು ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಇನ್ನಿತರೆ ಅವಶ್ಯಕ ಸಲಕರಣೆಗಳನ್ನು ಅರಣ್ಯ ಪಡೆ ಮುಖ್ಯಸ್ಥರು ಒದಗಿಸುವುದು.
5. ಅರಣ್ಯ ಪಡೆ ಮುಖ್ಯಸ್ಥರು ಜಿಲ್ಲಾ ಟಾಸ್ಕ್ ಫೋರ್ಸ್​​ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷಕರನ್ನು ಸ್ಥಳ ನಿಯುಕ್ತಿಗೊಳಿಸಿ ಕೂಡಲೇ ಆದೇಶ ಹೊರಡಿಸುವುದು.
6. ಆನೆ ಹಾವಳಿ ಪ್ರದೇಶಗಳಿಗೆ ಕೂಡಲೇ ತಲುಪಲು ಅನುಕೂಲವಾಗುವಂತೆ ಪ್ರತಿ ಜಿಲ್ಲಾ ಟಾಸ್ಕ್ ಫೋರ್ಸ್​ಗೆ ಮೂರು ಬೊಲೆರೋ ಜೀಪ್ ಒದಗಿಸುವುದು ಹಾಗೂ ಕ್ಯಾಂಟರ್ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನಿಯೋಜಿಸುವುದು.
7. ಆನೆಗಳನ್ನು ಹಿಮ್ಮೆಟ್ಟಿಸುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಸಹಾಯ ಪಡೆಯುವುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನರು; ಕತ್ತಲಲ್ಲಿ ಹರಿದ ಅಂಗಿಯಲ್ಲೇ ಪರಿಸ್ಥಿತಿ ವಿವರಿಸಿದ ಕುಮಾರಸ್ವಾಮಿ..

ಸಿದ್ದರಾಮಯ್ಯ ಅರ್ಜಿ, ಹೈಕಮಾಂಡ್ ಮರ್ಜಿ: ಮುಂದಿನ ಚುನಾವಣೆಯಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + one =
Remember me
