ಮಂಡ್ಯ:ಅರಣ್ಯ ಇಲಾಖೆ ಅಧಿಕಾರಿಗಳು ಬಸವನ ಬೆಟ್ಟ ಅರಣ್ಯ ಪ್ರದೇಶದ ಕಡೆಗೆ ಓಡಿಸಿದ್ದ ಕಾಡಾನೆಗಳು ಮತ್ತೆ ಮಳವಳ್ಳಿ ತಾಲೂಕು ಹಲಗೂರು ಸಮೀಪದ ಅಂತರವಳ್ಳಿ ಕೆರೆಗೆ ಬಂದಿವೆ.ಕಳೆದ ವಾರ ಭೀಮನಕಿಂಡಿ ಅರಣ್ಯ ಪ್ರದೇಶದಿಂದ ಆಗಮಿಸಿದ್ದ ಐದು ಕಾಡಾನೆಗಳನ್ನು ಬಾಳೆಹೊನ್ನಿಗ, ಗುಂಡಾಪುರ, ಎಚ್.ಬಸಾಪುರ ಮಾರ್ಗವಾಗಿ ಬಸವನಬೆಟ್ಟ ಅರಣ್ಯ ಪ್ರದೇಶದ ಕಡೆಗೆ ಓಡಿಸಲಾಗಿತ್ತು. ದಾರಿ ತಪ್ಪಿದ ಐದು ಕಾಡಾನೆಗಳು ಬಾಣಸಮುದ್ರ, ಹೊಸಪುರ, ಮಾರ್ಗವಾಗಿ ಅಂತರವಳ್ಳಿ ಕೆರೆಯಲ್ಲಿ ಬೀಡು ಬಿಟ್ಟಿದ್ದವು.ದಾರಿ ತಪ್ಪಿ ಜನವಸತಿ ಪ್ರದೇಶದ ಕಡೆ ಬಂದಿರುವ ಕಾಡಾನೆಗಳನ್ನು ಮರಳಿ ಬಸವನಬೆಟ್ಟ ಕಾಡಿಗೆ ಅಟ್ಟಲು ಪ್ರಯತ್ನಿಸಲಾಗುತ್ತಿದೆ ಎಂದು ವಲಯ ಅರಣ್ಯ ಅಧಿಕಾರಿ ಮಹದೇವು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಾದ ಮಹದೇವು, ದೇವರಾಜು, ಶಿವರಾಜು, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಡಿ.ರವಿಕುಮಾರ್ ಇತರರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
