ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗಿ ಬಾಧಿಸುತ್ತಿದ್ದು, ಇದೀಗ ಉದಯೋನ್ಮುಖ ಕ್ರಿಕೆಟಿಗ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಘಟನೆಯೂ ಫೆಬ್ರವರಿ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕೆ. ಹೊಯ್ಸಳ (34) ಎಂದು ಗುರುತಿಸಲಾಗಿದ್ದು, ಏಜಿಸ್ ಸೌತ್ ಝೋನ್ ಟೂರ್ನಿಯಲ್ಲಿ ದುರ್ಘಟನೆ ಸಂಭವಿಸಿದೆ.
ಗುರುವಾರ ಏಜಿಸ್ ಸೌತ್ ಝೋನ್ ಟೂರ್ನಿಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿತ್ತು. ಈ ವೇಳೆ ತಂಡದೊಂದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದಾರೆ.
Saddened to hear about the sudden demise of Karnataka's emerging cricketer, fast bowler K. Hoysala, during the Aegis South Zone Tournament.My heartfelt condolences go out to his family and friends in this hour of grief.Recent incidents of youth succumbing to cardiac arrest…
ಇದನ್ನೂ ಓದಿ:ಹೇ ಗೂಗಲ್ ನನ್ನ ವಯಸ್ಸು 31 ಅಲ್ಲಾ; ನಟಿ ದೀಪಿಕಾ ದಾಸ್​ ಹೀಗೆ ಹೇಳಿದ್ಯಾಕೆ
ಕೂಡಲೇ ತಂಡದ ಸದಸ್ಯರು ಹಾಗೂ ಮೈದಾನದ ಸಿಬ್ಬಂದಿ ಅವರನ್ನು ನಗರದ ಬೌರಿಂಗ್​ ಆಸ್ಪತ್ರೆಗೆ ದಾಖಲಿಸಿದ್ದು, ಮಾರ್ಗಮಧ್ಯೆಯೇ ಅವರ ಪ್ರಾಣಪಕ್ಷಿ ಹಾರಿ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಫೆಬ್ರವರಿ 22 ನೇ ಗುರುವಾರದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಯುವ ಕ್ರಿಕೆಟಿಗ ಹೊಯ್ಸಳ ನಿಧನಕ್ಕೆ ಸಂತಾಪ ಸೂಚಿಸಿರುವ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​, ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗನ ನಿಧನದ ಬಗ್ಗೆ ಕೇಳಿ ದುಃಖವಾಗುತ್ತಿದೆ. ವೇಗದ ಬೌಲರ್ ಹೊಯ್ಸಳ ಏಜಿಸ್ ದಕ್ಷಿಣ ವಲಯ ಪಂದ್ಯಾವಳಿಯ ವೇಳೆ ಹೃದಯಘಾತದಿಂದ ನಿಧನರಾಗಿದ್ದಾರೆ. ಅವರ ಸ್ನೇಹಿತರು ಮತ್ತು ಕುಟುಂಬಕ್ಕೆ ನನ್ನ ಸಂತಾಪಗಳು.
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಕರು ಹೃದಯ ಸ್ತಂಭನಕ್ಕೆ ಬಲಿಯಾಗುತ್ತಿರುವ ಇತ್ತೀಚಿನ ಘಟನೆಗಳು ಆರೋಗ್ಯ ಜಾಗೃತಿಯ ಮಹತ್ವವನ್ನು ಒತ್ತಿಹೇಳುತ್ತವೆ. ಹೀಗಾಗಿ ಹೃದಯದ ಆರೋಗ್ಯದ ಬಗ್ಗೆ ನಾವು ಜಾಗರೂಕರಾಗಿರಬೇಕು ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
