ಬೆಂಗಳೂರುಆರಂಭದಲ್ಲಿಯೇ ಕ್ಯಾನ್ಸರ್ ಪತ್ತೆಹಚ್ಚುವ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆ ಅವಶ್ಯಕತೆಯಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕ್ಯಾನ್ಸರ್ ತಪಾಸಣೆಗೆ ಒತ್ತು ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಆರೋಗ್ಯ ಇಲಾಖೆ ಹಾಗೂ ಸರ್ಜಿಕಲ್ ಸೊಸೈಟಿ ಆ್ ಬೆಂಗಳೂರು ಸೇರಿ ಇತರೆ ಸಂಘಟನೆಗಳ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಯಾನ್‌ವಾಕ್ -2024 ಕ್ಯಾನ್ಸರ್ ಜಾಗೃತಿ ನಡಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ನಿಯಮಿತ ವ್ಯಾಯಾಮ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಸೇರಿ ಆರೋಗ್ಯಪೂರ್ಣ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಮೂಲಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಆರಂಭಿಕ ಹಂತದಲ್ಲಿಯೇ ಕ್ಯಾನ್ಸರ್ ಅನ್ನು ಪತ್ತೆ ಮಾಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬಹುದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಜನರು ಕ್ಯಾನ್ಸರ್ ವಿಚಾರದಲ್ಲಿ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.
ಸರ್ಜಿಕಲ್ ಸೊಸೈಟಿ ಬೆಂಗಳೂರು ಅಧ್ಯಕ್ಷ ರಾಜಶೇಖರ್ ಮಾತನಾಡಿ, ಆರೋಗ್ಯವಂತರಾಗಲು ಪ್ರತಿ ದಿನವೂ ಕನಿಷ್ಠ ಒಂದು ಗಂಟೆಯಾದರೂ ವಾಕಿಂಗ್ ಮಾಡಬೇಕು. ಕ್ಯಾನ್ಸರ್ ಅನ್ನು ಮೊದಲ ಹಂತದಲ್ಲಿಯೇ ಪತ್ತೆ ಹಚ್ಚಿದರೆ ಬೇಗನೆ ಚಿಕಿತ್ಸ ನೀಡಿ ರೋಗಿಯ ಜೀವ ಉಳಿಸಬಹುದು ಎಂದರು.
ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚು ಕಾಣಿಸಿಕೊಳ್ಳುತ್ತಿರುವುದರಿಂದ ಈ ಬಗ್ಗೆ ಜಾಗೃತಿ ಮೂಡಿಸಲು ಪುಸ್ತಕಗಳನ್ನು ಪ್ರಕಟಿಸಲಾಗಿದೆ. ಕನ್ನಡ, ತಮಿಳು, ತೆಲುವು, ಮಲಯಾಳಂ, ಮರಾಠಿ, ಗುಜರಾತಿ, ಬೆಂಗಾಲಿ ಭಾಷೆಯಲ್ಲಿ ಮುದ್ರಣಗೊಂಡಿದೆ. ಸೂಚನೆಯಂತೆ ಸೂಕ್ತ ಸಮಯದಲ್ಲಿ ವೈದ್ಯರ ಸಲಹೆಯಂತೆ ಕ್ಯಾನ್ಸರ್ ರೋಗ ಮುಕ್ತ ಜೀವನ ನಡೆಸಬಹುದು ಎಂದು ತಿಳಿಸಿದರು.
ಮುಂಜಾನೆಯೇ 10 ಸಾವಿರಕ್ಕೂ ಹೆಚ್ಚು ಜನರು ಕ್ಯಾನ್ಸರ್ ಜಾಗೃತಿ ನಡಿಗೆಯಲ್ಲಿ ಪಾಲ್ಗೊಂಡು, ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಒಂದಾಗೋಣ ಎಂಬ ಘೋಷವಾಕ್ಯಗಳನ್ನು ಕೂಗಿದರು.
ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಕೈ ಜೋಡಿಸಿ ಘೋಷವಾಕ್ಯದಡಿ 5 ಕಿ.ಮೀ. ವಾಕಥಾನ್ ನಡೆಸಲಾಯಿತು. ನಡಿಗೆಯಲ್ಲಿ ನಟ ನೆನಪಿರಲಿ ಪ್ರೇಮ್, ಅಭಿಜಿತ್, ವಿನಯ್‌ರಾಜಕುಮಾರ್, ಗಿರಿರಾಜ್, ನಟಿ ಕಾರುಣ್ಯರಾಮ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ರಾಷ್ಟ್ರೀಯ ಆರೋಗ್ಯ ಮಿಷನ್ ವ್ಯವಸ್ಥಾಪಕ ನಿರ್ದೇಶಕ ನವೀನ್ ಭಟ್ ಸೇರಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 5 =
Remember me
