ಬೆಂಗಳೂರು:ಬಿಎಂಟಿಸಿ ಸಿಬ್ಬಂದಿಯೊಬ್ಬರು ರೆಕಾರ್ಡ್ ರೂಮ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಶಾಂತಿನಗರ ಬಿಎಂಟಿಸಿ ಕಚೇರಿಯಲ್ಲಿ ನಡೆದಿದೆ.
ಮೃತರನ್ನು ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಮಹೇಶ್​ ಉಕ್ಕಲಿ (42) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ನೇಮಕಾತಿ ವಿಭಾಗದಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಇವರು ಕುಟುಂಬದವರೊಂದಿಗೆ ಕೆಂಗೇರಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಸಿಕ್ಕ ಅವಕಾಶವನ್ನು…; ಟೀಮ್​ ಇಂಡಿಯಾ ನೂತನ ಕೋಚ್​ ಕುರಿತು ಅಚ್ಚರಿಯ ಹೇಳಿಕೆ ನೀಡಿದ ಬ್ರೆಟ್​ ಲೀ
ಕೆಲ ದಿನಗಳ ಹಿಂದೆ ರೆಕಾರ್ಡ್​ ರೂಮ್​ನ ಬೀಗ ಪಡೆದಿದ್ದ ಮಹೇಶ್​ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್​ ಮನೆಗೆ ಬಾರದೆ ಇರುವುದರಿಂದ ಆತಂಕಗೊಂಡ ಕುಟುಂಬಸ್ಥರು ಮಂಗಳವಾರ ಮಧ್ಯಾಹ್ನ ಶಾಂತಿನಗರ ಬಿಎಂಟಿಸಿ ಕಚೇರಿ ಬಳಿ ಬಂದಿ ವಿಚಾರಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣ ಏನು ಎಂದು ಈವರೆಗೂ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − twelve =
Remember me
