ಬೆಂಗಳೂರು:ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಇದನ್ನೂ ಓದಿ:‘ಸಬ್ಕಾ ಸಾಥ್, ಸಬ್ಕಾ ವಿಕಾಸ್ ‘ ಘೋಷಣೆ ಅನಗತ್ಯ: ಬಿಜೆಪಿ ನಾಯಕ ಸುವೇಂದು ಅಧಿಕಾರಿ
ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಸಂಬಂಧ ಸರ್ಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಕೌಶಲಗಳಿಲ್ಲದ ಕನ್ನಡಿಗರಿಗೆ ಕೌಶಲ್ಯ ನೀಡಿ ಸಜ್ಜುಗೊಳಿಸುವ ಕೆಲಸವನ್ನೂ ಸರಕಾರವೇ ಮಾಡಲಿದೆ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.
India is currently experiencing a manufacturing and industrial revolution driven by the global China Plus One policy. In this competitive era, states like Karnataka, Maharashtra, Tamil Nadu, and Telangana are striving to be at their best. It is of utmost importance for all states…pic.twitter.com/Y4Qll1DzxW
— M B Patil (@MBPatil)July 17, 2024

ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. ‘ಗ್ಲೋಬಲ್ ಚೈನಾ ಒನ್’ ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ ಬಣ್ಣಿಸಿದ್ದಾರೆ.
ಬೆಂಗಳೂರು: ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನಿಸಿದ ಜಿಟಿ ಮಾಲ್ ಸಿಬ್ಬಂದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 8 =
Remember me
